ಉಡುಪಿ ವಿಡಿಯೋ ಪ್ರಕರಣ : ಎಸ್ ಐ ಟಿ ತನಿಖೆಗೆ ಆಗ್ರಹಿಸಿ ಶಾಸಕರಿಂದ ರಾಜ್ಯಪಾಲರಿಗೆ ಮನವಿ
Thumbnail
ಉಡುಪಿ : ಇಲ್ಲಿನ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ಮೊಬೈಲ್ ಫೋನ್ ಮೂಲಕ ಹಿಂದೂ ವಿದ್ಯಾರ್ಥಿನಿಯರ ವಿಡಿಯೋ ಚಿತ್ರೀಕರಿಸಿದ ಪ್ರಕರಣವನ್ನು ಎಸ್.ಐ.ಟಿ ತನಿಖೆ ನಡೆಸಲು ರಾಜ್ಯ ಸರಕಾರಕ್ಕೆ ಆದೇಶ ನೀಡುವಂತೆ ರಾಜ್ಯಪಾಲರಿಗೆ ಇಂದು ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಶಾಸಕರು ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಕೋಟ ಶ್ರೀನಿವಾಸ ಪೂಜಾರಿ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಉಡುಪಿ ಶಾಸಕ ಯಶ್ಪಾಲ್‌ ಸುವರ್ಣ, ಬೈಂದೂರು ಶಾಸಕ ಗುರುರಾಜ್‌ ಗಂಟಿಹೊಳೆ, ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್‌ ಕಾಮತ್‌, ಮಂಗಳೂರು ಉತ್ತರ ಶಾಸಕ ಭರತ್‌ ಶಟ್ಟಿ, ಕುಂದಾಪುರ ಶಾಸಕ ಕಿರಣ್‌ ಕೊಡ್ಗಿ, ಬಂಟ್ವಾಳ ಶಾಸಕ ರಾಜೇಶ್‌ ನಾಯ್ಕ್‌ ಉಳೆಪಾಡಿ, ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಮುಂತಾದವರು ಉಪಸ್ಥಿತರಿದ್ದರು.
04 Aug 2023, 04:50 PM
Category: Kaup
Tags: