ಪಲಿಮಾರು : ಹೊೖಗೆ ಫ್ರೆಂಡ್ಸ್ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ
Thumbnail
ಪಲಿಮಾರು : ಇಲ್ಲಿನ ಹೊೖಗೆ ಫ್ರೆಂಡ್ಸ್ ಸಂಸ್ಥೆಯ ವತಿಯಿಂದ ಸ್ವಾತಂತ್ರೋತ್ಸವದ ಪ್ರಯುಕ್ತ ಸರಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಈ ಸಂದರ್ಭ ಫಲಿಮಾರು ಗ್ರಾಮ ಪಂಚಾಯತ್ ಅಧ್ಯಕ್ಷೆ ಗಾಯತ್ರಿ ಡಿ ಪ್ರಭು, ಪಲಿಮಾರು ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಗ್ರೆಟ್ಟಾ ಮೊರಸ್, ಉಪನ್ಯಾಸಕಿ ವಿಜಯಲಕ್ಷ್ಮಿ , ಪ್ರೌಢಶಾಲಾ ವಿಭಾಗದ ಹಿರಿಯ ಸಹ ಶಿಕ್ಷಕಿ ಸುನಿತಾ, ಕನ್ನಡ ಭಾಷಾ ಶಿಕ್ಷಕರಾದ ಸುಧಾಕರ್ ಶೆಣೈ, ದೈಹಿಕ ಶಿಕ್ಷಣ ಶಿಕ್ಷಕಿ ಅಮೃತಾ, ಹೊೖಗೆ ಫ್ರೆಂಡ್ಸ್ ನ ಅಧ್ಯಕ್ಷ ರಿತೇಶ್ ದೇವಾಡಿಗ, ಕಾರ್ಯದರ್ಶಿ ಸತೀಶ ಕುಮಾರ್, ಸದಸ್ಯರಾದ ದಿನೇಶ್, ಅಂಕಿತ್, ಜ್ಞಾನೇಶ್, ಅರುಣ್, ನಿಕೇಶ್ ಪುತ್ರನ್, ಪುರುಷೋತ್ತಮ, ಪಲಿಮಾರು ಸರಕಾರಿ ಪದವಿ ಪೂರ್ವ ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಪ್ರಸಾದ್ ಪಲಿಮಾರು ಉಪಸ್ಥಿತರಿದ್ದರು.
Additional image
13 Aug 2023, 05:50 PM
Category: Kaup
Tags: