ಕುತ್ಯಾರು : ಆನೆಗುಂದಿ ಸರಸ್ವತಿ ಪೀಠ ಸೂರ್ಯ ಚೈತನ್ಯ ಶಾಲೆ - ಸ್ವಾತಂತ್ರ್ಯ ದಿನಾಚರಣೆ ; ಶಾಲಾ ಶೈಕ್ಷಣಿಕ ಪರಿಕರ ವಿತರಣೆ
ಕುತ್ಯಾರು : ಆನೆಗುಂದಿ ಸರಸ್ವತಿ ಪೀಠ ಸೂರ್ಯ ಚೈತನ್ಯ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಹಾಗೂ ಶಾಲಾ ಶೈಕ್ಷಣಿಕ ಪರಿಕರ ವಿತರಣೆ ಕಾರ್ಯಕ್ರಮ ಜರಗಿತು.
ಶಾಲಾ ಅಧ್ಯಕ್ಷರಾದ ಮೋಹನ್ ಕುಮಾರ್ ಬೆಳ್ಳೂರು ಧ್ವಜಾರೋಹಣ ನೆರವೇರಿಸಿದರು.
ಈ ಸಂದರ್ಭ ಅದಾನಿ ಫೌಂಡೇಶನ್ ವತಿಯಿಂದ ಸಂಸ್ಥೆಯ ಮಕ್ಕಳಿಗಾಗಿ ಶಾಲಾ ಶೈಕ್ಷಣಿಕ ಪರಿಕರ ವಿತರಣೆ ನಡೆಯಿತು.
ಈ ಸಂಧರ್ಭ ಸಂಸ್ಥೆಯ ಉಪಾಧ್ಯಕ್ಷರಾದ ವಿವೇಕ್ ಆಚಾರ್ಯ, ಕಾರ್ಯದರ್ಶಿಯಾದ ಗುರುರಾಜ್ ಆಚಾರ್ಯ, ಶೈಕ್ಷಣಿಕ ಸಲಹೆಗಾರರಾದ ದಿವಾಕರ್ ಆಚಾರ್ಯ, ಶಿಕ್ಷಕರು, ವಿದ್ಯಾರ್ಥಿಗಳು, ಪೋಷಕರು ಉಪಸ್ಥಿತರಿದ್ದರು.
ಸ್ವಾತಂತ್ರ್ಯೋತ್ಸವದ ನಿಮಿತ್ತ ವಿದ್ಯಾರ್ಥಿಗಳಿಂದ ದೇಶಭಕ್ತಿಗೀತೆ ಗಾಯನ, ಭಾಷಣ ಜರಗಿತು.
ಪ್ರಾಂಶುಪಾಲೆ ಸಂಗೀತಾ ಸ್ವಾಗತಿಸಿದರು.
ಶಿಕ್ಷಕಿ ಅನಿತಾ ಕಾರ್ಯಕ್ರಮವನ್ನು ನಿರೂಪಿಸಿದರು. ಶಿಕ್ಷಕಿ ಶಾರೋನ್ ವಂದಿಸಿದರು.
