ಪಡುಬಿದ್ರಿ : ಕರ್ನಾಟಕ ಪಬ್ಲಿಕ್ ಸ್ಕೂಲ್ ಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭೇಟಿ
Thumbnail
ಪಡುಬಿದ್ರಿ : ಇಲ್ಲಿನ ಕರ್ನಾಟಕ ಪಬ್ಲಿಕ್ ಸ್ಕೂಲ್ ಗೆ ಶಾಸಕರು, ಕಾಲೇಜು ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಗುರ್ಮೆ ಸುರೇಶ್ ಶೆಟ್ಟಿ‌ ಬುಧವಾರ ಭೇಟಿ ನೀಡಿದರು. ಶಾಸಕರು ಶಾಲೆಯ ಕುಂದು ಕೊರತೆ ಬಗ್ಗೆ ಮನವಿ ಸ್ವೀಕರಿಸಿ ಶಾಲಾ ಮಕ್ಕಳಿಗೆ ಸಾಂಕೇತಿಕವಾಗಿ ಶೂ ವಿತರಣೆ ಮಾಡಿದರು. ಪಡುಬಿದ್ರಿ ಕರ್ನಾಟಕ ಪಬ್ಲಿಕ್ ಸ್ಕೂಲ್ ವತಿಯಿಂದ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಆಯ್ಕೆಯಾದ ಗುರ್ಮೆ ಸುರೇಶ್ ಶೆಟ್ಟಿ ಅವರನ್ನು ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಪಡುಬಿದ್ರಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ರವಿ ಶೆಟ್ಟಿ, ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಶಶಿಕಾಂತ್ ಪಡುಬಿದ್ರಿ, ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷರಾದ ನೀತಾ ಗುರುರಾಜ್, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಅಶೋಕ್ ಕಾಮತ್, ಹಳೆ ವಿದ್ಯಾರ್ಥಿ ಸಂಘದ ಗೌರವಾಧ್ಯಕ್ಷರಾದ ಸುಕುಮಾರ್, ಪ್ರಾಂಶುಪಾಲರಾದ ಶಾಲಿನಿ, ಮುಖ್ಯ ಶಿಕ್ಷಕರಾದ ಕೃಷ್ಣಯ್ಯ, ಶಿಕ್ಷಕರಾದ ಗೀತಾ, ಹಳೆ ವಿದ್ಯಾರ್ಥಿಗಳಾದ ಶರತ್ ಶೆಟ್ಟಿ, ಕೃಷ್ಣ ಬಂಗೇರ ಮತ್ತಿತರರು ಉಪಸ್ಥಿತರಿದ್ದರು.
Additional image Additional image Additional image
16 Aug 2023, 06:13 PM
Category: Kaup
Tags: