ಎಸ್ ಕೆ ಪಿ ಎ ಕಾಪು ವಲಯ : ವಿಶ್ವ ಛಾಯಾಗ್ರಹಣ ದಿನಾಚರಣೆ ; ಕುಟುಂಬ ಸಮ್ಮಿಲನ ಕಾರ್ಯಕ್ರಮ
ಕಾಪು : ಸೌತ್ ಕೆನರಾ ಫೋಟೋಗ್ರಾಫಸ್೯ ಆಸೋಸಿಯೇಶನ್ ದಕ್ಷಿಣ ಕನ್ನಡ – ಉಡುಪಿ ಜಿಲ್ಲೆ ಇದರ ಕಾಪು ವಲಯದಿಂದ ವಿಶ್ವ ಛಾಯಾಗ್ರಹಣ ದಿನಾಚರಣೆ ಮತ್ತು ಕುಟುಂಬ ಸಮ್ಮಿಲನ ಕಾರ್ಯಕ್ರಮ ಶನಿವಾರ ಕಾಪು ಹೋಟೆಲ್ K1 ಸಭಾಭವನದಲ್ಲಿ ಜರಗಿತು.
ಕಾರ್ಯಕ್ರಮವನ್ನು ಮುಖ್ಯ ಅತಿಥಿಯಾಗಿ ಆಗಮಿಸಿದ ಎಸ್ ಕೆ ಪಿ ಎ ದ.ಕ ಮತ್ತು ಉಡುಪಿ ಜಿಲ್ಲಾಧ್ಯಕ್ಷರಾದ ಆನಂದ ಎನ್ ಬಂಟ್ವಾಳ ಉದ್ಘಾಟಿಸಿದರು.
ಈ ಸಂದರ್ಭ ಮಾತನಾಡಿದ ಅವರು ಕಾಪು ವಲಯದ ಫೋಟೋಗ್ರಾಫಸ್೯ಗಳ ಸಂಘಟಿತ ಪ್ರಯತ್ನದಿಂದ ಒಳ್ಳೆಯ ಕಾರ್ಯಕ್ರಮಗಳು ಮೂಡಿ ಬರುತ್ತಿದೆ. ಮುಂದೆಯೂ ಇಂತಹ ಕಾರ್ಯಕ್ರಮಗಳು ನಡೆಯಲಿ ಎಂದು ಶುಭಹಾರೈಸಿದರು.
ಕಾರ್ಯಕ್ರಮದಲ್ಲಿ ಎಸ್ ಕೆ ಪಿ ಎ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ವಾಸುದೇವ ರಾವ್, ಕಟಪಾಡಿ ಸಹಕಾರಿ ವ್ಯವಸಾಯಿಕ ಸೊಸೈಟಿ ಅಧ್ಯಕ್ಷ ವಿಜಯ ಕುಮಾರ್ ಉದ್ಯಾವರ, ಕಟಪಾಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಅಶೋಕ್ ರಾವ್, ಫೋಟೋ ಪ್ಯಾಲೇಸ್ ಉಡುಪಿ ಯ ರವಿರಾಜ್ ಕಿದಿಯೂರು, ಎಸ್ ಕೆ ಪಿ ಎ ದಕ್ಷಿಣ ಕನ್ನಡ – ಉಡುಪಿ ಜಿಲ್ಲೆ ಕಾರ್ಯದರ್ಶಿ ನಿತಿನ್ ಬೆಳುವಾಯಿ ಸಂದರ್ಭೋಚಿತವಾಗಿ ಮಾತನಾಡಿದರು.
ಸಮ್ಮಾನ : ಹಿರಿಯ ಛಾಯಾಚಿತ್ರಕಾರರಾದ ಹರೀಶ್ ದೇವಾಡಿಗ ಹೆಜಮಾಡಿ, ತುಕಾರಾಂ ಪಡುಬಿದ್ರಿ, ರವಿಕುಮಾರ್ ಕಟಪಾಡಿ ಇವರನ್ನು ಸಮ್ಮಾನಿಸಲಾಯಿತು.
ಎಸ್ ಕೆ ಪಿ ಎ ಕಾಪು ವಲಯ ಅಧ್ಯಕ್ಷ ವಿನೋದ್ ಕಾಂಚನ್ ಅಧ್ಯಕ್ಷತೆ ವಹಿಸಿದ್ದರು.
ಈ ಸಂದರ್ಭ ಎಸ್ ಕೆ ಪಿ ಎ ಕಾಪು ವಲಯ ಗೌರವಾಧ್ಯಕ್ಷ ರವಿಕುಮಾರ್ ಕಟಪಾಡಿ, ಉಪಾಧ್ಯಕ್ಷರುಗಳಾದ ಸಚಿನ್ ಉಚ್ಚಿಲ, ರವಿರಾಜ್ ಶೆಟ್ಟಿ ಬೆಳ್ಮಣ್, ಪ್ರಧಾನ ಕಾರ್ಯದರ್ಶಿ ರಾಜೇಶ್ ಶಂಕರಪುರ, ಕೋಶಾಧಿಕಾರಿ ರಾಘವೇಂದ್ರ ಭಟ್, ಕಾರ್ಯಕ್ರಮ ಸಂಯೋಜಕ ಸತೀಶ್ ಎರ್ಮಾಳು ಮತ್ತಿತರರು ಉಪಸ್ಥಿತರಿದ್ದರು.
ಕುಟುಂಬ ಸಮ್ಮಿಲನ ಕಾರ್ಯಕ್ರಮದ ಅಂಗವಾಗಿ ವಿವಿಧ ಮನೋರಂಜನಾ, ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಿದವು.
