ಕಾಪು : ಶಿರ್ವ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಸವಿತಾ ಪೂಜಾರಿ, ಉಪಾಧ್ಯಕ್ಷರಾಗಿ ವಿಲ್ಸನ್‌ ರೊಡ್ರಿಗಸ್‌ ಆಯ್ಕೆ
Thumbnail
ಕಾಪು : ತಾಲೂಕಿನ ಶಿರ್ವ ಗ್ರಾ.ಪಂ. ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಬುಧವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಸವಿತಾ ಪೂಜಾರಿ ಮತ್ತು ಉಪಾಧ್ಯಕ್ಷರಾಗಿ ವಿಲ್ಸನ್‌ ರೊಡ್ರಿಗಸ್‌ ಆಯ್ಕೆಯಾಗಿದ್ದಾರೆ. ಇಬ್ಬರೂ ಕಾಂಗ್ರೆಸ್‌ ಬೆಂಬಲಿತರಾಗಿದ್ದಾರೆ. ಅಧ್ಯಕ್ಷ ಸ್ಥಾನ ಹಿಂದುಳಿದ ಅ ವರ್ಗ ಮಹಿಳೆಗೆ ಮೀಸಲಾಗಿದ್ದು, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾಗಿತ್ತು. 34 ಸದಸ್ಯಬಲದ ಶಿರ್ವ ಗ್ರಾ.ಪಂ. ನಲ್ಲಿ 20 ಮಂದಿ ಕಾಂಗ್ರೆಸ್‌ ಬೆಂಬಲಿತರು ಮತ್ತು 14 ಮಂದಿ ಬಿಜೆಪಿ ಬೆಂಬಲಿತ ಸದಸ್ಯರಿದ್ದರು. ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ ಸವಿತಾ ಪೂಜಾರಿ 20 ಮತ ಮತ್ತು ಆಶಾ ಆಚಾರ್ಯ 14 ಮತ ಗಳಿಸಿದ್ದಾರೆ. ಉಪಾಧ್ಯಕ್ಷ ವಿಲ್ಸನ್‌ ರೊಡ್ರಿಗಸ್‌ 19 ಮತ ಗಳಿಸಿದ್ದು ಬಿಜೆಪಿ ಬೆಂಬಲಿತ ರಾಜೇಶ್‌ ಶೆಟ್ಟಿ 15 ಮತ ಗಳಿಸಿದ್ದಾರೆ. ಉಪಾಧ್ಯಕ್ಷ ಸ್ಥಾನಕ್ಕೆ ಒಂದು ಅಡ್ಡ ಮತದಾನವಾಗಿದೆ. ಉಡುಪಿ ಲೋಕೋಪಯೋಗಿ ಇಲಾಖೆಯ ಸಹಾಯಕ ಎಂಜಿನಿಯರ್‌ ಕೆ. ಪಿ.ಗಿರೀಶ್‌ ಚುನಾವಣಾಧಿಕಾರಿಯಾಗಿದ್ದರು.
23 Aug 2023, 07:22 PM
Category: Kaup
Tags: