ಉದ್ಯಾವರ : ಕಳುವುಗೈದ ಲಕ್ಷಾಂತರ ಮೌಲ್ಯದ ಸೊತ್ತು ಸಹಿತ ಕಳ್ಳನ ಬಂಧನ
ಉದ್ಯಾವರ : ಇಲ್ಲಿನ ಬೊಳ್ಜೆ ನಿವಾಸಿ ಅನಿತಾ ಡಿ. ಸಿಲ್ವಾ ಅವರ ಮನೆಯಲ್ಲಿ ಚಿನ್ನಾಭರಣ ದೋಚಿ ಪರಾರಿಯಾಗಿದ್ದ ಕಳ್ಳನನ್ನು ಕಾಪು ಪೊಲೀಸರು ಬಂಧಸಿದ್ದು ಚಿನ್ನಾಭರಣ, ನಗದು, ಸ್ಕೂಟಿ ಸಹಿತ
8,02,083 ರೂಪಾಯಿ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಕಟಪಾಡಿ ಏಣಗುಡ್ಡೆ ಗ್ರಾಮದ ಅಚ್ಚಡ ನಿವಾಸಿ ಜೋನ್ ಪ್ರಜ್ವಲ್ ಫೆರ್ನಾಂಡಿಸ್ (32) ಬಂಧಿತ ಆರೋಪಿ.
ಬಂಧಿತನಿಂದ 6,90,713 ರೂಪಾಯಿ ಮೌಲ್ಯದ ಚಿನ್ನಾಭರಣ, ನಗದು, ಮೋಟಾರು ಸೈಕಲ್ ಸಹಿತ ಬೆಲೆಬಾಳುವ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
