ಕಾಪು : ಗೃಹಲಕ್ಷ್ಮಿ ಯೋಜನೆಗೆ ಚಾಲನೆ
ಕಾಪು : ತಾಲೂಕು ಆಡಳಿತ, ತಾಲೂಕು ಪಂಚಾಯತ್ ಕಾಪು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಪುರಸಭೆ ಕಾಪು ಇವರ ಸಹಯೋಗದಲ್ಲಿ ಬುಧವಾರ ಕಾಪು ಲಕ್ಷ್ಮೀ ಜನಾರ್ಧನ ದೇವಸ್ಥಾನದ ಸಭಾಂಗಣದಲ್ಲಿ ಜರಗಿದ ಗೃಹಲಕ್ಷ್ಮಿ ಯೋಜನೆ ಅನುಷ್ಠಾನ ಕಾರ್ಯಕ್ರಮಕ್ಕೆ ಕಾಪು ತಹಸೀಲ್ದಾರ್ ನಾಗರಾಜ ವಿ ನಾಯ್ಕಡ ಚಾಲನೆ ನೀಡಿದರು.
ಈ ಸಂದರ್ಭ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯರವರ ಸರಕಾರವು ತನ್ನ 100 ದಿನದ ಕಡಿಮೆ ಕಾಲಾವಧಿಯಲ್ಲಿ ಮೂರು ಭರವಸೆಯನ್ನು ಈಡೇರಿಸಿದೆ. ಕೆಲವೇ ಸಮಯದಲ್ಲಿ ಇನ್ನೂ ಎರಡು ಭರವಸೆಯನ್ನು ಪೂರ್ಣಗೊಳಿಸಲಿದೆ ಎಂದರು.
ಈ ಸಂದರ್ಭ ಪುರಸಭಾ ಸದಸ್ಯರಾದ ಹರಿಣಾಕ್ಷಿ, ವಿದ್ಯಾಲತಾ, ಉಮೇಶ್ ಕರ್ಕೆರ, ಮೋಹಿನಿ ಶೆಟ್ಟಿ,
ಕಾರ್ಯ ನಿರ್ವಹಣಾಧಿಕಾರಿ ವಿಜಯ, ಯೋಜನಾಧಿಕಾರಿ ವೀಣಾ ವಿವೇಕಾನಂದ, ಪುರಸಭಾ ಮುಖ್ಯ ಅಧಿಕಾರಿ ಸಂತೋಷ್ ಎಸ್ ಟಿ ಮತ್ತಿತರರು ಉಪಸ್ಥಿತರಿದ್ದರು.
