ಕಾಪು : ಶಾಸಕರ ಕಛೇರಿಯಲ್ಲಿ ಬ್ರಹ್ಮಶ್ರೀ ನಾರಾಯಣಗುರುಗಳ 169ನೇ ಜಯಂತಿ ಆಚರಣೆ
ಕಾಪು: ತಾಲ್ಲೂಕು ಆಡಳಿತ ಸೌಧದಲ್ಲಿರುವ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿಯವರ ಕಛೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 169ನೇ ಜಯಂತಿ ಆಚರಣೆ ನಡೆಯಿತು.
ಶಾಸಕರು ಬ್ರಹ್ಮಶ್ರೀ ನಾರಾಯಣ ಗುರುಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ನಮನ ಸಲ್ಲಿಸಿದರು.
ಈ ಸಂದರ್ಭ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿ, ಬ್ರಹ್ಮಶ್ರೀ ನಾರಾಯಣ ಗುರುಗಳು ಸಮಾಜಕ್ಕೆ ಒಂದೇ ಜಾತಿ, ಒಂದೇ ಧರ್ಮ, ಒಂದೇ ಮತವನ್ನು ಸಾರಿದ ದಾರ್ಶನಿಕರು. ಅವರ ತತ್ವ ಸಿದ್ದಾಂತ ಅನುಕರಣೀಯ, ಆದರ್ಶಯುತವಾಗಿದೆ ಎಂದರು.
ಜಿಲ್ಲಾ ಬಿಜೆಪಿ ಮಹಿಳಾ ಘಟಕಾಧ್ಯಕ್ಷೆ ವೀಣಾ ಶೆಟ್ಟಿ, ಉಪಾಧ್ಯಕ್ಷ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಗೀತಾಂಜಲಿ ಸುವರ್ಣ, ಜನಪ್ರತಿನಿಧಿಗಳು, ಪಕ್ಷದ ಪ್ರಮುಖರು, ಕಾರ್ಯಕರ್ತರು ಮತ್ತು ಬಿಲ್ಲವ ಸಮಾಜದ ಮುಖಂಡರು ಉಪಸ್ಥಿತರಿದ್ದರು.
