ಸೌಜನ್ಯ ಪ್ರಕರಣ : ಮರು ತನಿಖೆಗೆ ಒಳಪಡಿಸುವಂತೆ ದ.ಕ, ಉಡುಪಿ ಜಿಲ್ಲೆಯ ಶಾಸಕರ ನಿಯೋಗ ಮುಖ್ಯಮಂತ್ರಿಗೆ ಮನವಿ
Thumbnail
ಉಡುಪಿ : ಸೌಜನ್ಯ ಪ್ರಕರಣವನ್ನು ಮರು ತನಿಖೆ ಒಳಪಡಿಸುವಂತೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಶಾಸಕರ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿತು. ಮನವಿ ಸ್ವೀಕರಿಸಿದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಸೌಜನ್ಯ ಪ್ರಕರಣವನ್ನು ಮರು ತನಿಖೆ ಒಳಪಡಿಸಲು ರಾಜ್ಯ ಸರಕಾರಕ್ಕೆ ಕಾನೂನಿನಲ್ಲಿ ಅವಕಾಶವಿರುವುದಿಲ್ಲ. ಈ ವಿಷಯವನ್ನು ಸೌಜನ್ಯ ಪೋಷಕರಿಗೆ ನಾನು ತಿಳಿಸಿದ್ದೇನೆ. ಈಗಾಗಲೇ ಕಾನೂನು ಸಲಹೆಯನ್ನು ನಾನು ಪಡೆದಿರುವುದರಿಂದ ಸೌಜನ್ಯಳ ಪೋಷಕರು ಮೇಲ್ಮನವಿ ಸಲ್ಲಿಸಬಹುದು ಅಥವಾ ಸಿಬಿಐ ಮೇಲ್ಮನವಿ ಸಲ್ಲಿಸಲು ಅವಕಾಶವಿರುತ್ತದೆ. ನಿಮ್ಮ ಮನವಿಯಂತೆ ಇನ್ನೊಮ್ಮೆ ನಾನು ಕಾನೂನು ಸಲಹೆ ಪಡೆಯುವುದಾಗಿ ಭರವಸೆ ನೀಡಿದರು.
05 Sep 2023, 07:24 AM
Category: Kaup
Tags: