ಕಾಪು ಲಯನ್ಸ್ ಕ್ಲಬ್ ವತಿಯಿಂದ ನಿವೃತ್ತ ಶಿಕ್ಷಕ ರಾಧಾಕೃಷ್ಣ ಪ್ರಭುರವರಿಗೆ ಸನ್ಮಾನ
Thumbnail
ಕಾಪು : ಇಲ್ಲಿನ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆಯ ಅಂಗವಾಗಿ ಶ್ರೀ ದುರ್ಗಾಪರಮೇಶ್ವರಿ ಹಿರಿಯ ಪ್ರಾಥಮಿಕ ಶಾಲೆ, ಇಲ್ಲಿಯ ನಿವೃತ್ತ ಶಿಕ್ಷಕರು, ತಾಲೂಕು ಪ್ರಶಸ್ತಿ ವಿಜೇತರು, ಯೋಗ ಶಿಕ್ಷಕರಾದಂತಹ ರಾಧಾಕೃಷ್ಣ ಪ್ರಭು ಕಾಪು ಇವರನ್ನ ಮಾಜಿ ಜಿಲ್ಲಾ ಗವರ್ನರ್ ಸುರೇಶ್ ಶೆಟ್ಟಿ ನೇತೃತ್ವದಲ್ಲಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನದ ಸವಿನೆನಪಿಗಾಗಿ ಶಿಕ್ಷಕರ ದಿನಾಚರಣೆಯನ್ನು ಪ್ರತಿ ವರ್ಷ ಕೂಡ ಕಾಪು ಲಯನ್ಸ್ ಕ್ಲಬ್ ವತಿಯಿಂದ ಕಾರ್ಯಕ್ರಮವನ್ನು ಹಮ್ಮಿಕೊಳ್ಳುತ್ತಿದ್ದು ದೇಶದ ಭವಿಷ್ಯವನ್ನು ಕಟ್ಟುವಂತಹ ಶಿಕ್ಷಕರು ಮುಂದಿನ ಯುವ ಪೀಳಿಗೆಗೆ ಒಳ್ಳೆಯ ಮಾರ್ಗದರ್ಶನವನ್ನು ನೀಡಿ ಮುಂದಿನ ಪೀಳಿಗೆಗೆ ಅನುವು ಮಾಡಿ ಕೊಟ್ಟ ಶಿಕ್ಷಕರು ಶ್ರೇಷ್ಠರು ಎಂದು ಹೇಳಿದರು. ವಲಯ ಅಧ್ಯಕ್ಷ ವರುಣ್ ಶೆಟ್ಟಿ, ಕೋಶಾಧಿಕಾರಿ ನಡಿಕೆರೆ ರತ್ನಾಕರ್ ಶೆಟ್ಟಿ, ಜಿಲ್ಲಾ ಸಂಯೋಜಕ ವಿಟಿ ಹೆಗಡೆ ಉಪಸ್ಥಿತರಿದ್ದರು. ಕಾಪು ಲಯನ್ಸ್ ಅಧ್ಯಕ್ಷ ಉದಯ ಶೆಟ್ಟಿ ಸ್ವಾಗತಿಸಿ, ಲಯನ್ಸ್ ನಿರ್ದೇಶಕ ಹರೀಶ್ ನಾಯಕ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
05 Sep 2023, 06:02 PM
Category: Kaup
Tags: