ಪಡುಬಿದ್ರಿ : ಬಂಟರ ಸಂಘ - ನಿವೃತ್ತ ಶಿಕ್ಷಕರಿಗೆ ಸನ್ಮಾನ
Thumbnail
ಪಡುಬಿದ್ರಿ : ಬಂಟರ ಸಂಘ (ರಿ.) ಪಡುಬಿದ್ರಿ, ಬಂಟ್ಸ್ ವೆಲ್ಫೇರ್ ಟ್ರಸ್ಟ್ (ರಿ.) ಪಡುಬಿದ್ರಿ, ಬಂಟರ ಮಹಿಳಾ ವಿಭಾಗ ಪಡುಬಿದ್ರಿ ಇವರ ವತಿಯಿಂದ ಶಿಕ್ಷಕರ ದಿನಾಚರಣೆ ಪ್ರಯುಕ್ತ ಸಂಘದ ಮಾಜಿ ಕಾರ್ಯದರ್ಶಿ ಹಾಗೂ ನಿವೃತ್ತ ಶಿಕ್ಷಕರಾದ ಬಾಲಕೃಷ್ಣ ಶೆಟ್ಟಿ ದಂಪತಿಗಳನ್ನು ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರಾಗಿದ್ದ, ನಿವೃತ್ತ ಶಿಕ್ಷಕ ನಾರಾಯಣಶೆಟ್ಟಿ ದಂಪತಿಗಳನ್ನು ಅವರ ಮನೆಗೆ ತೆರಳಿ ಗೌರವಿಸಲಾಯಿತು. ಈ ಸಂದರ್ಭ ಸಂಘದ ಅಧ್ಯಕ್ಷರಾದ ಡಾ| ದೇವಿ ಪ್ರಸಾದ್ ಶೆಟ್ಟಿ, ಕಾರ್ಯದರ್ಶಿ ಪ್ರಕಾಶ್ ಶೆಟ್ಟಿ ಪಡುಹಿತ್ಲು, ಕೋಶಾಧಿಕಾರಿ ರವಿಶೆಟ್ಟಿ ಗುಂಡ್ಲಾಡಿ, ಟ್ರಸ್ಟ್ ಅಧ್ಯಕ್ಷರಾದ ಶಶಿಧರ ಶೆಟ್ಟಿ ಎರ್ಮಾಳು, ಸಂಘದ ಉಪಾಧ್ಯಕ್ಷೆ ಅನಿತಾ ವಿಶು ಶೆಟ್ಟಿ, ಮಹಿಳಾ ವಿಭಾಗದ ಅಧ್ಯಕ್ಷೆ ಜ್ಯೋತಿ ಶೆಟ್ಟಿ ಎರ್ಮಾಳು, ಕಾರ್ಯದರ್ಶಿ ವಾಣಿ ರವಿ ಶೆಟ್ಟಿ, ಕೋಶಾಧಿಕಾರಿ ರಶ್ಮಿ ಸುಧಾಕರ್ ಶೆಟ್ಟಿ, ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷೆ ಶೀಲಾ ಕೆ ಶೆಟ್ಟಿ, ಮಾಜಿ ಅಧ್ಯಕ್ಷೆ ಶೋಭಾ ಜೆ ಶೆಟ್ಟಿ, ಉಪಾಧ್ಯಕ್ಷೆ ಭಾರತಿ ಬಿ ಶೆಟ್ಟಿ, ಶಾಲಿನಿ ಶಶಿಧರ್ ಶೆಟ್ಟಿ, ಜಯ ಶೆಟ್ಟಿ ಪದ್ರ ಉಪಸ್ಥಿತರಿದ್ದರು.
Additional image
07 Sep 2023, 10:46 AM
Category: Kaup
Tags: