ಪಡುಬಿದ್ರಿ : ಗಾಂಜಾ ಸೇವನೆ - ವ್ಯಕ್ತಿಯೋರ್ವ ವಶಕ್ಕೆ
Thumbnail
ಪಡುಬಿದ್ರಿ : ಇಲ್ಲಿನ ಠಾಣಾ ವ್ಯಾಪ್ತಿಯ ನಂದಿಕೂರು ಗ್ರಾಮದ ಇಂಡಸ್ಟ್ರಿಯಲ್ ಏರಿಯಾದಲ್ಲಿ ನಶೆಯಲ್ಲಿ ತೂರಾಡುತ್ತಿದ್ದ ವ್ಯಕ್ತಿಯೋರ್ವನನ್ನು‌ ಪಡುಬಿದ್ರಿ ಪೋಲಿಸರು ವಶಕ್ಕೆ ಪಡೆದಿದ್ದಾರೆ. ಪಡುಬಿದ್ರಿ ಠಾಣೆಯ ಉಪನಿರೀಕ್ಷಕರಾದ ಪ್ರಸನ್ನ ಎಂ.ಎಸ್ ರೌಂಡ್ಸ್ ನಲ್ಲಿರುವಾಗ ರಕ್ಷಿತ್ ಶೆಟ್ಟಿ(29) ಎಂಬಾತನು ಯಾವುದೋ ಅಮಲಿನಲ್ಲಿದ್ದವನಂತೆ ತೂರಾಡುತ್ತಿದ್ದು, ಅವನು ಯಾವುದೋ ಮಾದಕ ಪದಾರ್ಥ ಸೇವಿಸಿರುವ ಬಗ್ಗೆ ಅನುಮಾನಗೊಂಡು ಆತನನ್ನು ವಶಕ್ಕೆ ಪಡೆದುಕೊಂಡು ಮಣಿಪಾಲದ ಪೊರೆನ್ಸಿಕ್ ಮೆಡಿಸಿನ್ ವಿಭಾಗದ ವೈದ್ಯಾಧಿಕಾರಿಯವರ ಎದುರು ಹಾಜರುಪಡಿಸಿ ವೈದ್ಯಕೀಯ ತಪಾಸಣೆಗೊಳಪಡಿಸಿದ್ದು, ಮಾದಕ ವಸ್ತುವಾದ ಗಾಂಜಾ ಸೇವಿಸಿರುವ ಬಗ್ಗೆ ವೈದ್ಯರು ದೃಢಪತ್ರವನ್ನು ನೀಡಿದ್ದಾರೆ. ಈ ಬಗ್ಗೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
07 Sep 2023, 11:12 AM
Category: Kaup
Tags: