ಕಾಪು : ಇನ್ನಂಜೆ‌ಯಲ್ಲಿ ಮೊಸರು ಕುಡಿಕೆ ಕ್ರೀಡಾಕೂಟ -2023 ; ಮುದ್ದುಕೃಷ್ಣ ವೇಷ ಸ್ಪರ್ಧೆ
Thumbnail
ಕಾಪು : ತಾಲೂಕಿನ ಇನ್ನಂಜೆ ಯುವಕ ಮಂಡಲ (ರಿ.) ಇನ್ನಂಜೆ ಇವರ ಆಶ್ರಯದಲ್ಲಿ ಇನ್ನಂಜೆ ಗ್ರಾಮ ಪಂಚಾಯತ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ.) ಇನ್ನಂಚೆ ಒಕ್ಕೂಟ, ಬಿಲ್ಲವ ಸೇವಾ ಸಂಘ ಇನ್ನಂಜೆ, ಜೇ.ಸಿ.ಐ ಶಂಕರಪುರ ಜಾಸ್ಮಿನ್, ರೋಟರಿ ಸಮುದಾಯ ದಳ ಇನ್ನಂಜೆ, ಇನ್ನಂಜೆ ಯುವತಿ ಮಂಡಲ (ರಿ.) ಇನ್ನಂಜೆ ಇವರ ಸಹಕಾರದೊಂದಿಗೆ ಶ್ರೀ ಕೃಷ್ಣ ಲೀಲೋತ್ಸವದ ಪ್ರಯುಕ್ತ ಇಂದು ಮೊಸರು ಕುಡಿಕೆ ಕ್ರೀಡಾಕೂಟ-2023, ಮುದ್ದುಕೃಷ್ಣ ವೇಷ ಸ್ಪರ್ಧೆಯನ್ನು ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟಿಸಿ ಶುಭಹಾರೈಸಿದರು. ಈ ಸಂದರ್ಭ ಮುದ್ದು ಮುದ್ದಾದ ಕೃಷ್ಣ ಆಲ್ಬಮ್ ಸಾಂಗ್ ಅನ್ನು ಬಿಡುಗಡೆಗೊಳಿಸಲಾಯಿತು. ಈ ಸಂದರ್ಭದಲ್ಲಿ ಇನ್ನಂಜೆ ಯುವಕ ಮಂಡಲ ಅಧ್ಯಕ್ಷರಾದ ದಿವೇಶ್, ಇನ್ನಂಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಾಲಿನಿ, ಇನ್ನಂಜೆ ಎಸ್.ವಿ.ಎಚ್ ಕಾಲೇಜು ಪ್ರಾಂಶುಪಾಲರಾದ ಪುಂಡರಿಕಾಕ್ಷ ಕೊಡಂಚ, ಇನ್ನಂಜೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಚಂದ್ರಕಲಾ, ಶ್ರೀಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆ ಉಡುಪಿ ಜಿಲ್ಲೆಯ ನಿರ್ದೇಶಕರಾದ ಶಿವರಾಮ ಪ್ರಭು, ಇನ್ನಂಜೆ ಎಸ್.ವಿ.ಎಚ್ ಕಾಲೇಜಿನ ನಿವೃತ್ತ ಉಪನ್ಯಾಸಕರಾದ ಯು. ನಂದನ್ ಕುಮಾರ್, ತಾಲೂಕು ಪಂಚಾಯತ್ ಮಾಜಿ ಸದಸ್ಯರಾದ ನವೀನ್ ಅಮೀನ್ ಹಾಗೂ ಇನ್ನಂಜೆ ಯುವಕ ಮಂಡಲದ ಪದಾಧಿಕಾರಿಗಳು ಉಪಸ್ಥಿತರಿದ್ದರು.
Additional image Additional image
07 Sep 2023, 11:22 AM
Category: Kaup
Tags: