ಉಡುಪಿ ತಾಲ್ಲೂಕು ಮಟ್ಟದ ಪದವಿ ಪೂರ್ವ ಕಾಲೇಜು ಬಾಲಕ-ಬಾಲಕಿಯರ ಖೋ-ಖೋ ಪಂದ್ಯಾಟಕ್ಕೆ ಚಾಲನೆ
Thumbnail
ಕಾಪು : ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಡುಪಿ ಜಿಲ್ಲೆ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು, ಉದ್ಯಾವರ ಇವರ ಜಂಟಿ ಆಶ್ರಯದಲ್ಲಿ ಇಂದು ಉದ್ಯಾವರ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಲಾದ ಉಡುಪಿ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ "ಖೋ-ಖೋ ಪಂದ್ಯಾಟ"ವನ್ನು ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಉದ್ಘಾಟಿಸಿದರು. ಈ ಸಂದರ್ಭ ಶಾಸಕರು ಮಾತನಾಡಿ ಕ್ರೀಡೆಗೆ ಜಾತಿ, ಧರ್ಮ ಎಂಬ ಭೇದಭಾವವಿಲ್ಲ. ಮಕ್ಕಳಲ್ಲಿರುವ ಪ್ರತಿಭೆಯನ್ನು ಗುರುತಿಸಿ ನಾವು ಅದನ್ನು ಪ್ರೋತ್ಸಾಹಿಸಬೇಕು ಎಂದರು. ಈ ಸಂದರ್ಭದಲ್ಲಿ ಉದ್ಯಾವರ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಾಲತಿ ಸಾಲ್ಯಾನ್, ಉಪಾಧ್ಯಕ್ಷರಾದ ರಾಜೇಶ್ ಕುಂದರ್, ಗ್ರಾಮ ಪಂಚಾಯತ್ ಸದಸ್ಯರುಗಳಾದ ಜಿತೇಂದ್ರ ಶೆಟ್ಟಿ, ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ವಿಜಯ್ ಕುಮಾರ್, ಸದಸ್ಯರಾದ ಅಜಿತ್ ಕುಮಾರ್ ಶಣೈ, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರಾದ ವಸಂತಿ ಎಸ್, ಪುಷ್ಪಾ ಹಾಗೂ ಮುಕಾಂಬಿಕಾ, ಗುರುಪ್ರಸಾದ್ ಮತ್ತು ಉದ್ಯಾವರ ಸರಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರಾದ ಕೃಷ್ಣಮೂರ್ತಿ ಉಪಸ್ಥಿತರಿದ್ದರು.
Additional image
11 Sep 2023, 12:05 PM
Category: Kaup
Tags: