ಕಾಪು : ಹೊಸ ಮಾರಿಗುಡಿ ದೇವಳದಲ್ಲಿ ಭಾರತದ ಸಂವಿಧಾನ ಪೀಠಿಕೆ ಓದುವ ಮೂಲಕ ಪ್ರಜಾಪ್ರಭುತ್ವ ದಿನಾಚರಣೆ
Thumbnail
ಕಾಪು : ಕರ್ನಾಟಕ ರಾಜ್ಯ ಸರ್ಕಾರದ ಆದೇಶದಂತೆ, ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಭಾರತದ ಸಂವಿಧಾನ ಪೀಠಿಕೆಯನ್ನು ಓದುವ ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯಾದ್ಯಂತ ಹಮ್ಮಿಕೊಂಡಿದ್ದು ಇಂದು ಕಾಪು ಹೊಸ ಮಾರಿಗುಡಿ ದೇವಳದಲ್ಲಿ ಭಾರತದ ಸಂವಿಧಾನ ಪೀಠಿಕೆಯನ್ನು ಓದುವ ಕಾರ್ಯಕ್ರಮವು ಜರುಗಿತು. ಈ ಸಂದರ್ಭ ಹೊಸ ಮಾರಿಗುಡಿ ದೇವಳದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ರಮೇಶ್ ಹೆಗ್ಡೆ ಕಲ್ಯ, ಸದಸ್ಯರುಗಳಾದ ಚಂದ್ರಶೇಖರ ಅಮೀನ್, ಬಾಬು ಮಲ್ಲಾರು, ಪ್ರಬಂಧಕರಾದ ಗೋವರ್ಧನ ಶೇರಿಗಾರ್ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.
15 Sep 2023, 06:40 PM
Category: Kaup
Tags: