ನರೇಂದ್ರ ಮೋದಿ ಜನ್ಮದಿನದ ಪ್ರಯುಕ್ತ ಕಾಪು ಮಂಡಲ ಬಿಜೆಪಿ ವತಿಯಿಂದ ಬೃಹತ್ ರಕ್ತದಾನ ಶಿಬಿರ
Thumbnail
ಕಾಪು : ಭಾರತೀಯ ಜನತಾ ಪಾರ್ಟಿ ಕಾಪು ಮಂಡಲ, ಉಡುಪಿ ಜಿಲ್ಲಾ ಆಸ್ಪತ್ರೆ ರಕ್ತ ನಿಧಿ ವಿಭಾಗದ ಸಹಯೋಗದೊಂದಿಗೆ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ ಅವರ 73ನೇ ಜನ್ಮದಿನದ ಪ್ರಯುಕ್ತ ರವಿವಾರ ಕಾಪು ಮಂಡಲ ಬಿಜೆಪಿ ಕಚೇರಿಯಲ್ಲಿ ಬೃಹತ್ ರಕ್ತದಾನ ಶಿಬಿರವನ್ನು ಆಯೋಜಿಸಲಾಯಿತು. ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಶಿಬಿರವನ್ನು ಉದ್ಘಾಟಿಸಿದರು. ಈ ಸಂದರ್ಭ ಶಾಸಕರು ಮಾತನಾಡಿ ಭಾರತದ ಕೀರ್ತಿಯನ್ನು ವಿಶ್ವದಾದ್ಯಂತ ಪಸರಿಸಿದ ಕೀರ್ತಿ ನರೇಂದ್ರ ಮೋದಿ ಅವರಿಗೆ ಸಲ್ಲುತ್ತದೆ. ಇತ್ತೀಚಿಗೆ ನಡೆದ ಜಿ20 ಶೃಂಗಸಭೆಯನ್ನು ಯಶಸ್ವಿಯಾಗಿ ನಡೆಸಿ ಸಮರ್ಥ ನಾಯಕ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ನರೇಂದ್ರ ಮೋದಿಯವರು ಮುಂದಿನ ದಿನಗಳಲ್ಲಿ ಭಾರತದ ಆರ್ಥಿಕತೆಯನ್ನು ಪ್ರಪಂಚದಲ್ಲಿ ಮೂರನೇ ಸ್ಥಾನಕ್ಕೆ ಕೊಂಡೊಯ್ಯದರಲ್ಲಿ ಸಂಶಯವಿಲ್ಲ ಎಂದರು. ಈ ಸಂದರ್ಭದಲ್ಲಿ ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಶ್ರೀಕಾಂತ್ ನಾಯಕ್, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ನಿಕಟಪೂರ್ವ ಶಾಸಕರಾದ ಲಾಲಾಜಿ ಆರ್ ಮೆಂಡನ್, ಕಾಪು ಮಂಡಲ ಬಿಜೆಪಿ ಉಪಾಧ್ಯಕ್ಷರಾದ ನವೀನ್ ಎಸ್.ಕೆ, ಪ್ರಧಾನ ಕಾರ್ಯದರ್ಶಿಗಳಾದ ಗೋಪಾಲ ಕೃಷ್ಣ ರಾವ್, ಉಡುಪಿ ಜಿಲ್ಲಾ ಆಸ್ಪತ್ರೆಯ ರಕ್ತನಿಧಿ ವಿಭಾಗದ ಡಾ. ವೀಣಾ ಹಾಗೂ ವಿವಿಧ ಮೋರ್ಚಾದ ಅಧ್ಯಕ್ಷರು, ಪದಾಧಿಕಾರಿಗಳು, ಜನಪ್ರತಿನಿಧಿಗಳು, ಪಕ್ಷದ ಹಿರಿಯರು, ಪ್ರಮುಖರು, ಪದಾಧಿಕಾರಿಗಳು ಉಪಸ್ಥಿತರಿದ್ದರು.
Additional image
17 Sep 2023, 01:11 PM
Category: Kaup
Tags: