ಶಂಕರಪುರ : ಬಿಲ್ವ ಪತ್ರ ಗಿಡ ವಿತರಣಾ ಅಭಿಯಾನ
Thumbnail
ಶಂಕರಪುರ : ದ್ವಾರಕಾಮಯಿ ಮಠ ಶ್ರೀ ಸಾಯಿ ಮುಖ್ಯಪ್ರಾಣ ದೇವಸ್ಥಾನ ಶಂಕರಪುರ ಮತ್ತು ಜಯಂಟ್ಸ್ ಗ್ರೂಪ್ ಆಫ್ ಬ್ರಹ್ಮಾವರ ಇದರ ವತಿಯಿಂದ ಗುರುವಾರ ಜಯಂಟ್ಸ್ ಸಪ್ತಾಹದ ಅಂಗವಾಗಿ ಬಿಲ್ವ ಪತ್ರ ಗಿಡ ವಿತರಣಾ ಅಭಿಯಾನ ಕಾಯ೯ಕ್ರಮವನ್ನು ಶ್ರೀ ಸಾಯಿ ಈಶ್ವರ್ ಗುರೂಜಿ ಉದ್ಘಾಟಿಸಿ ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಅವರು ಬಿಲ್ವಪತ್ರ ಗಿಡದಿಂದ ನಮ್ಮ ಆರೋಗ್ಯಕ್ಕೆ ಮತ್ತು ಪರಿಸರಕ್ಕೆ ವಿಶೇಷವಾದ ಲಾಭವಿದೆ. ಈ ಗಿಡವನ್ನು ನೆಟ್ಟು ನಮ್ಮ ಆರೋಗ್ಯವನ್ನು ಮತ್ತು ಆಧ್ಯಾತ್ಮಿಕವಾಗಿ ನಮ್ಮ ಸಮಾಜವನ್ನು ಕೂಡ ಕಾಪಾಡಬಹುದು ಎಂದು ಕರೆ ನೀಡಿದರು. ಕಾರ್ಯಕ್ರಮದಲ್ಲಿ ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ವೀಣಾ ಶೆಟ್ಟಿ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ಗೀತಾಂಜಲಿ ಸುವರ್ಣ, ಜಯಂಟ್ಸ್ ಗ್ರೂಪ್ ಆಫ್ ಬ್ರಹ್ಮಾವರ ಇದರ ಅಧ್ಯಕ್ಷ ವಿವೇಕಾನಂದ ಕಾಮತ್, ನಿಕಟ ಪೂರ್ವ ಅಧ್ಯಕ್ಷ ಸುಂದರ ಪೂಜಾರಿ ಮೂಡುಕುಕ್ಕುಡೆ, ಸುನೀತಾ ಮಧುಸೂಧನ್ ಮುಂತಾದವರು ಉಪಸ್ಥಿತರಿದ್ದರು. ಕಾರ್ಯಕ್ರಮದ ಕುರಿತಾಗಿ ಜಯಂಟ್ಸ್ ಗ್ರೂಪ್ ಫೆಡರೇಶನ್ ಮಾಜಿ ಅಧ್ಯಕ್ಷ ಮಧುಸೂದನ್ ಹೇರೂರು ಬಿಲ್ವ ಪತ್ರ ಅಭಿಯಾನದ ಕುರಿತಾಗಿ ಮಾಹಿತಿ ನೀಡಿದರು. ಈ ಸಂದರ್ಭ ಬೆಂಗಳೂರಿನ ಸಾಯಿ ಭಕ್ತರಾದ ಶ್ರೀರಾಮು ಇವರು ಕೊಡ ಮಾಡಿದ ಸಾಯಿ ಮುಖ್ಯಪ್ರಾಣ ಭಾವಚಿತ್ರವನ್ನು ಈ ಸಂದರ್ಭದಲ್ಲಿ ಬಿಡುಗಡೆಗೊಳಿಸಲಾಯಿತು. ರಾಘವೇಂದ್ರ ಪ್ರಭು ಕವಾ೯ಲು ನಿರೂಪಿಸಿ ವಂದಿಸಿದರು. ಸುಮಾರು 300 ಜನರಿಗೆ ಗಿಡಗಳನ್ನು ವಿತರಿಸಲಾಯಿತು.
22 Sep 2023, 08:31 PM
Category: Kaup
Tags: