ಉಡುಪಿ : ದುಶ್ಚಟ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಜನಜಾಗೃತಿ ಜಾಥಾ ಮತ್ತು ಸಮಾವೇಶ
Thumbnail
ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ (ರಿ.) ಉಡುಪಿ ತಾಲೂಕು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ (ರಿ.), ಬೆಳ್ತಂಗಡಿ ಜಿಲ್ಲಾ ಜನಜಾಗೃತಿ ವೇದಿಕೆ ಉಡುಪಿ ಮತ್ತು ತಾಲೂಕು ಜನಜಾಗೃತಿ ವೇದಿಕೆ ಉಡುಪಿ, ಕಾಪು, ಬ್ರಹ್ಮಾವರ ಹಾಗೂ ಶ್ರೀ ಕೃಷ್ಣ ಮಠ ಪರ್ಯಾಯ ಶ್ರೀ ಕೃಷ್ಣಾಪುರ ಮಠ, ಉಡುಪಿ ಇವರ ಜಂಟಿ ಆಶ್ರಯದಲ್ಲಿ ಇಂದು‌ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಗಾಂಧಿ ಜಯಂತಿ ಸಂಭ್ರಮಾಚರಣೆಯ ಪ್ರಯುಕ್ತ ದುಶ್ಚಟ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಜನಜಾಗೃತಿ ಜಾಥಾ ಮತ್ತು ಸಮಾವೇಶ - 2023 ಕಾರ್ಯಕ್ರಮ ಜರಗಿತು. ಉಡುಪಿ ತಾಲೂಕು ಜನ ಜಾಗೃತಿ ವೇದಿಕೆ ಅಧ್ಯಕ್ಷರಾದ ಸತ್ಯಾನಂದ ನಾಯಕ್ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಪರ್ಯಾಯ ಶ್ರೀ ಕೃಷ್ಣಾಪುರ ಮಠದ ದಿವಾನರಾದ ವರದರಾಜ ಭಟ್, ಜಿಲ್ಲಾಧಿಕಾರಿಗಳಾದ ವಿದ್ಯಾ ಕುಮಾರಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಉಡುಪಿ ಪ್ರಾದೇಶಿಕ ನಿರ್ದೇಶಕರಾದ ದುಗ್ಗೇಗೌಡ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ನಿಕಟಪೂರ್ವ ರಾಜ್ಯಾಧ್ಯಕ್ಷರಾದ ದೇವದಾಸ್ ಹೆಬ್ಬಾರ್, ಉಡುಪಿ ಜಿಲ್ಲಾ ಜನ ಜಾಗೃತಿ ವೇದಿಕೆ ಅಧ್ಯಕ್ಷರಾದ ನವೀನ್ ಚಂದ್ರ ಶೆಟ್ಟಿ, ಉಡುಪಿ ವಿಭಾಗ ಸೂಕ್ಷ್ಮ ವಿಮಾ ವಿಭಾಗ ಪ್ರಬಂಧಕರಾದ ದಿನೇಶ್ ಪ್ರಭು, ಬ್ರಹ್ಮಾವರ ತಾಲೂಕು ಜನ ಜಾಗೃತಿ ವೇದಿಕೆ ಅಧ್ಯಕ್ಷರಾದ ಪ್ರಕಾಶ್ ಶೆಟ್ಟಿ, ನಗರಸಭಾ ಸದಸ್ಯರಾದ ಮಾನಸ ಸಿ ಪೈ, ಉಡುಪಿ ತಾಲೂಕು ಪ್ರಗತಿಬಂಧು ಸ್ವಸಹಾಯ ಸಂಘಗಳ ಕೇಂದ್ರ ಒಕ್ಕೂಟದ ಅಧ್ಯಕ್ಷರಾದ ಶಮಿತ ಪಿ ಶೆಟ್ಟಿ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ನ ಯೋಜನಾಧಿಕಾರಿಗಳು, ಮೇಲ್ವಿಚಾರಕರು, ಪದಾಧಿಕಾರಿಗಳು ಉಪಸ್ಥಿತರಿದ್ದರು.
Additional image
02 Oct 2023, 01:53 PM
Category: Kaup
Tags: