ಬ್ರಹ್ಮಾವರ ಸಕ್ಕರೆ ಕಾರ್ಖಾನೆ ಅವ್ಯವಹಾರ - ಕಾಂಗ್ರೆಸ್ ಪಕ್ಷದಿಂದ ಬೃಹತ್ ಪ್ರತಿಭಟನಾ ಸಭೆ
Thumbnail
ಕಾಪು : ದ.ಕ ಜಿಲ್ಲಾ ಸಹಕಾರಿ ಸಕ್ಕರೆ ಕಾರ್ಖಾನೆ ನಿಯಮಿತ ಬ್ರಹ್ಮಾವರ ಇದರ ಹಳೆ ಸಾಮಾಗ್ರಿಗಳನ್ನು ಕಾನೂನು ಬಾಹಿರವಾಗಿ ಮಾರಾಟ ಮಾಡುವುದರ ಮೂಲಕ ಅವ್ಯವಹಾರ ನಡೆಸಿ ಕಾರ್ಖಾನೆಯ ಸದಸ್ಯರಿಗೆ ಮತ್ತು ರೈತರಿಗೆ ವಂಚಿಸಿರುವ ಆಡಳಿತ ಮಂಡಳಿಯ ವಿರುದ್ಧ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೇತೃತ್ವದಲ್ಲಿ, ಎಲ್ಲಾ ಬ್ಲಾಕ್ ಸಮಿತಿಗಳ ಸಹಭಾಗಿತ್ವದಲ್ಲಿ ಅಕ್ಟೋಬರ್ 9, ಸೋಮವಾರ ಬೆಳಿಗ್ಗೆ 10 ಗಂಟೆಗೆ, ಬ್ರಹ್ಮಾವರ - ಸಕ್ಕರೆ ಕಾರ್ಖಾನೆಯ ಎದುರು ಬೃಹತ್ ಪ್ರತಿಭಟನಾ ಸಭೆ ಯನ್ನು ಹಮ್ಮಿಕೊಳ್ಳಲಾಗಿದೆ. ಈ ಬಗ್ಗೆ ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆ ಮತ್ತು ಕಾಪು ಕಾಂಗ್ರೆಸ್ ಪಕ್ಷದ ಉಭಯ ಬ್ಲಾಕ್ ಸಮಿತಿಗಳ ಅಧ್ಯಕ್ಷರುಗಳು ಪ್ರಕಟನೆಯಲ್ಲಿ ತಿಳಿಸಿರುತ್ತಾರೆ.
05 Oct 2023, 09:30 PM
Category: Kaup
Tags: