ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಯ ಜನಪರ ಕಾರ್ಯ ಶ್ಲಾಘನೀಯ - ಡಾ|ದೇವಿಪ್ರಸಾದ್ ಶೆಟ್ಟಿ ಬೆಳಪು
ಪಡುಬಿದ್ರಿ : ಈ ಭಾಗದಲ್ಲಿ ಯಶಸ್ಸು ಕಂಡ ಸಹಕಾರಿ ಸಂಸ್ಥೆ ಪಡುಬಿದ್ರಿ ಸೊಸೈಟಿಯು ಲಾಭದ ಉದ್ದೇಶ ಹೊಂದದೆ ಜನಪರ ಕಾರ್ಯಕ್ರಮಗಳ ಮೂಲಕ ಅಭಿವೃದ್ಧಿ ಕಂಡಿದೆ. ಅದರಲ್ಲೂ ಗ್ರಾಮದ ಜನರ ಆರೋಗ್ಯದ ಬಗೆಯೂ ಕಾಳಜಿ ಹೊಂದಿದೆ. ಅದರಂತೆ ಗ್ರಾಮದ ಜನರಿಗೆ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಆಯೋಜನೆ ಮಾಡಿರುವುದು ಶ್ಲಾಘನೀಯ ಎಂದು ಬೆಳಪು ವ್ಯವಸಾಯ
ಸಹಕಾರಿ ಸಂಘದ ಅಧ್ಯಕ್ಷರಾದ ಡಾ| ದೇವಿಪ್ರಸಾದ್ ಶೆಟ್ಟಿ ಬೆಳಪು ಹೇಳಿದರು.
ಅವರು ಭಾನುವಾರ ಪಡುಬಿದ್ರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ (ನಿ), ಪ್ರಾಥಮಿಕ ಆರೋಗ್ಯ ಕೇಂದ್ರ ಪಡುಬಿದ್ರಿ ಹಾಗೂ ಶ್ರೀನಿವಾಸ ಆಸ್ಪತ್ರೆ ಇವರ ಆಶ್ರಯದಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಉದ್ಘಾಟಿಸಿ ಮಾತನಾಡಿದರು.
ಶಿಬಿರದಲ್ಲಿ ವೈದ್ಯಕೀಯ ವಿಭಾಗ,
ಚರ್ಮ, ಮಕ್ಕಳ ವಿಭಾಗ, ಕಿವಿಮೂಗು ಗಂಟಲು ವಿಭಾಗ, ಸ್ತ್ರೀರೋಗ ವಿಭಾಗ, ಎಲುಬು ಮತ್ತು ಕೀಲು ವಿಭಾಗ, ಹೃದಯ ರೋಗ, ಕಣ್ಣಿನ ವಿಭಾಗ,
ಶಸ್ತ್ರಚಿಕಿತ್ಸಾ ವಿಭಾಗದಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಫಲಾನುಭವಿಗಳು
ಪ್ರಯೋಜನ ಪಡೆದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ ಅಧ್ಯಕ್ಷರಾದ ವೈ ಸುಧೀರ್ ಕುಮಾರ್ ವಹಿಸಿದ್ದರು.
ಈ ಸಂದರ್ಭ ಪಡುಬಿದ್ರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ರಾಜಶ್ರೀ ಕಿಣಿ, ಮುಕ್ಕ ಶ್ರೀನಿವಾಸ ಆಸ್ಪತ್ರೆಯ ವೈದ್ಯಾಧಿಕಾರಿ
ಶಶಿರಾಜ್ ಶೆಟ್ಟಿ, ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಯ ಪ್ರಭಾರ ಕಾರ್ಯನಿರ್ವಹಣಾಧಿಕಾರಿ ದೀಪಕ್ ಸಾಲ್ಯಾನ್,
ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಯ ಉಪಾಧ್ಯಕ್ಷರಾದ ಗುರುರಾಜ್ ಪೂಜಾರಿ, ಸೊಸೈಟಿಯ ನಿರ್ದೇಶಕರು, ಆಸ್ಪತ್ರೆಯ ವೈದ್ಯರು, ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.
ಮಾಧವ ಆಚಾರ್ಯ ಪ್ರಾರ್ಥಿಸಿ, ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ ಅಧ್ಯಕ್ಷರಾದ ವೈ ಸುಧೀರ್ ಕುಮಾರ್ ಸ್ವಾಗತಿಸಿದರು.
ಸೊಸೈಟಿಯ ನಿರ್ದೇಶಕಿ ಸುಚರಿತ ಎಲ್ ಅಮೀನ್ ಕಾರ್ಯಕ್ರಮ ನಿರೂಪಿಸಿದರು. ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಯ ಉಪಾಧ್ಯಕ್ಷರಾದ ಗುರುರಾಜ್ ಪೂಜಾರಿ ವಂದಿಸಿದರು.
