ಪಡುಕುತ್ಯಾರು : ಆನೆಗುಂದಿ ಶ್ರೀ ಚಾತುರ್ಮಾಸ್ಯ ಕೃತಜ್ಞತಾ ಸಮರ್ಪಣಾ ಸಭೆ
Thumbnail
ಪಡುಕುತ್ಯಾರು :ಪರಮಪೂಜ್ಯ ಜಗದ್ಗುರು ಅನಂತಶ್ರೀವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಗಳವರ ಶೋಭಕೃತ್ ನಾಮ ಸಂವತ್ಸರದ 19ನೇ ವರ್ಷದ ಚಾತುರ್ಮಾಸ್ಯ ವ್ರತಾಚರಣೆ-2023 ಜುಲೈ 3ರಿಂದ ಸೆಪ್ಟಂಬರ್ 29 ತನಕ ಯಶಸ್ವಿಯಾಗಿ ಸಂಪನ್ನಗೊಂಡ ಬಗ್ಗೆ ಸೇವಾ ಕಾರ್ಯಕರ್ತರಿಗೆ ಕೃತಜ್ಞತಾ ಸಮರ್ಪಣಾ ಸಭೆ ನಡೆಯಿತು. ಚಾತುರ್ಮಾಸ್ಯ ವ್ರತ ನಿರ್ವಹಣಾ ಸಮಿತಿಯ ನೇತೃತ್ವದಲ್ಲಿ ಪಡುಕುತ್ಯಾರಿನ ಶ್ರೀ ಸರಸ್ವತೀ ಸತ್ಸಂಗ ಮಂದಿರದಲ್ಲಿ ನಡೆದ ಸಭೆಯಲ್ಲಿ ಪೀಠಾಧೀಶ್ವರರಾದ ಪರಮಪೂಜ್ಯ ಜಗದ್ಗುರು ಅನಂತ ಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಗಳವರು ಸೇವಾ ಕಾರ್ಯಕರ್ತರಿಗೆ ಸಹಕರಿಸಿದ ಎಲ್ಲರಿಗೂ ಫಲ ಮಂತ್ರಾಕ್ಷತೆಯನ್ನು ನೀಡಿ ಆಶೀರ್ವದಿಸಿದರು. ಸಭೆಯ ಅಧ್ಯಕ್ಷತೆಯನ್ನು ಚಾತುರ್ಮಾಸ್ಯ ವ್ರತ ನಿರ್ವಹಣಾ ಸಮಿತಿ ಮತ್ತು ಆನೆಗುಂದಿ ಪ್ರತಿಷ್ಠಾನದ ಅಧ್ಯಕ್ಷ ವಿ ಶ್ರೀಧರ ಆಚಾರ್ಯ ವಡೇರಹೋಬಳಿ ವಹಿಸಿದ್ದರು. ಸಭೆಯಲ್ಲಿ ಚಾತುರ್ಮಾಸ್ಯದ ವರದಿಯನ್ನು ಪ್ರಧಾನ ಕಾರ್ಯದರ್ಶಿ ಲೋಕೇಶ್ ಎಂ ಬಿ ಆಚಾರ್ ಕಂಬಾರ್ ಮಾಡಿದರು. ಚಾತುರ್ಮಾಸ್ಯದ ಆಯವ್ಯಯವನ್ನು ಕೋಶಾಧಿಕಾರಿ ಅರವಿಂದ ವೈ ಆಚಾರ್ಯ ಬೆಳುವಾಯಿ ಮಂಡಿಸಿದರು. ಚಾತುರ್ಮಾಸ್ಯ ವ್ರತ ನಿರ್ವಹಣಾ ಸಮಿತಿ ಗೌರವಾಧ್ಯಕ್ಷ ಪಿ.ವಿ ಗಂಗಾಧರ ಆಚಾರ್ಯ ಉಡುಪಿ ಉಪಸ್ಥಿತರಿದ್ದರು.
10 Oct 2023, 07:04 AM
Category: Kaup
Tags: