ಉಚ್ಚಿಲ ದಸರಾ ವೈಭವ : ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ಸ್ಪರ್ಧೆ -2023 - ಪೋಸ್ಟರ್ ಬಿಡುಗಡೆ
Thumbnail
ಉಚ್ಚಿಲ : ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಇದರ ಕಾಪು ವಲಯದ ಆಶ್ರಯದಲ್ಲಿ ಮೊಗವೀರ ಮಹಾಜನ ಸಂಘ (ರಿ.) ಉಚ್ಚಿಲ ಇದರ ಸಹಯೋಗದೊಂದಿಗೆ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ದಸರಾ ಮಹೋತ್ಸವದ ಪ್ರಯುಕ್ತ ಉಚ್ಚಿಲ ದಸರಾ ವೈಭವ ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ಸ್ಪರ್ಧೆ -2023 ಪೋಸ್ಟರನ್ನು ಗುರುವಾರ ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ ಕೋಟ್ಯಾನ್ ಬಿಡುಗಡೆಗೊಳಿಸಿದರು. ಈ ಸಂದರ್ಭ ಕ್ಷೇತ್ರ ಆಡಳಿತ ಅಧ್ಯಕ್ಷ ವಾಸುದೇವ ಸಾಲಿಯನ್, ಕ್ಷೇತ್ರದ ಪ್ರಧಾನ ಅರ್ಚಕರಾದ ರಾಘವೇಂದ್ರ ಉಪಾಧ್ಯಾಯ, ಸತೀಶ್ ಪಡುಕೆರೆ, ವಲಯದ ಅಧ್ಯಕ್ಷರಾದ ಸಚಿನ್ ಉಚ್ಚಿಲ, ಅರುಲ್ ಡಿಸೋಜಾ, ಅನಂತ್ ರಾಜ್ ಭಟ್, ಕೃಷ್ಣರಾವ್, ಸುಬ್ರಮಣ್ಯ ಐತಲ್, ಬಾಲಕೃಷ್ಣ ಪೂಜಾರಿ ಉಪಸ್ಥಿತರಿದ್ದರು. ವೀರೇಂದ್ರ ಶಿರ್ವ ಸ್ವಾಗತಿಸಿದರು. ರಾಘವೇಂದ್ರ ಭಟ್ ವಂದಿಸಿದರು.
12 Oct 2023, 05:01 PM
Category: Kaup
Tags: