ಉಡುಪಿ : ಮಹಿಷಾ ದಸರಾ ಆಚರಣೆಗೆ ಅವಕಾಶ ಕೊಡಬಾರದೆಂದು ಮನವಿ
ಉಡುಪಿ : ಸಮಸ್ತ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವಂತಹ ಮಹಿಷಾ ದಸರಾ ಆಚರಣೆಗೆ ಅವಕಾಶ ಕೊಡಬಾರದು ಎಂದು ವಿಶ್ವ ಹಿಂದೂ ಪರಿಷದ್ ಬಜರಂಗದಳ ಉಡುಪಿ ಜಿಲ್ಲಾ ವತಿಯಿಂದ ಉಡುಪಿ ಜಿಲ್ಲಾಧಿಕಾರಿ ಮತ್ತು ಪೋಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭ ಬಜರಂಗದಳ ಪ್ರಾಂತೀಯ ಸಂಚಾಲಕ ಸುನಿಲ್ ಕೆ. ಆರ್, ಉಡುಪಿ ಜಿಲ್ಲಾ
ವಿಶ್ವ ಹಿಂದೂ ಪರಿಷದ್ ಕಾರ್ಯದರ್ಶಿ ದಿನೇಶ್ ಮೆಂಡನ್, ಜಿಲ್ಲಾ ಸೇವಾ ಪ್ರಮುಖ್ ವಿಖ್ಯಾತ್ ಭಟ್, ಬಜರಂಗದಳ ಸಹ ಸಂಚಾಲಕ ಗುರುರಾಜ್ ಸಂಗಮ್ ಹಾಗೂ ತಾಲೂಕಿನ ಪ್ರಮುಖರು ಉಪಸ್ಥಿತರಿದ್ದರು.
