ಕಟಪಾಡಿ : ಉಚಿತ ಪ್ರಾಣ ಯೋಗ ಶಿಬಿರ ಉದ್ಘಾಟನೆ
Thumbnail
ಕಟಪಾಡಿ : ಪತಂಜಲಿ ಯೋಗ ಸಮಿತಿ ಉಡುಪಿ ಹಾಗೂ ಎಸ್ ವಿ ಎಸ್ ಹಳೆ ವಿದ್ಯಾರ್ಥಿ ಸಂಘ (ರಿ.) ಕಟಪಾಡಿ ಇವರ ಸಹಯೋಗದಲ್ಲಿ ಅಕ್ಟೋಬರ್ 15 ರಿಂದ 24ರ ವರೆಗೆ 10 ದಿನಗಳ ಕಾಲ ನಡೆಯುವ ಉಚಿತ ಪ್ರಾಣ ಯೋಗ ಶಿಬಿರವನ್ನು ಕಟಪಾಡಿಯ ಮಹಿಳಾ ಮಂಡಲದ ಸಭಾ ಭವನದಲ್ಲಿ ರವಿವಾರ ಮುಂಜಾನೆ ಎಸ್ ವಿ ಎಸ್ ವಿದ್ಯಾವರ್ಧಕ ಸಂಘದ ಸಂಚಾಲಕರಾದ ಕೆ. ಸತ್ಯೇಂದ್ರ ಪೈ. ಉದ್ಘಾಟಿಸಿದರು. ಉಡುಪಿ ಪತಂಜಲಿ ಯೋಗ ಸಮಿತಿಯ ಯೋಗ ಶಿಕ್ಷಕರಾದ ರಾಘವೇಂದ್ರ ಭಟ್, ವೆಂಕಟೇಶ್ ಮೇಹಂದಲೆ, ಜಗದೀಶ್ ಕುಮಾರ್, ಕಟಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಪ್ರಭಾ ಬಿ.ಶೆಟ್ಟಿ ಕಟಪಾಡಿ, ಹಳೆ ವಿದ್ಯಾರ್ಥಿ ಸಂಘದ ಮಹೇಶ್ ಅಂಚನ್, ರವಿರಾಜ್ ಶೆಟ್ಟಿ ಉಪಸ್ಥಿತರಿದ್ದರು. ಕಟಪಾಡಿ ಪತಂಜಲಿ ಯೋಗ ಕಕ್ಷೆಯ ರಾಜೇಶ್ ಕಾಮತ್, ರಾಮಚಂದ್ರ ಪೈ ಶಿಬಿರವನ್ನು ಆಯೋಜಿಸಿದ್ದರು. ಹಳೆ ವಿದ್ಯಾರ್ಥಿ ಸಂಘದ ಸದಸ್ಯ ನಾಗೇಶ್ ಕಾಮತ್ ಸ್ವಾಗತಿಸಿ, ವಂದಿಸಿದರು.
Additional image
15 Oct 2023, 01:34 PM
Category: Kaup
Tags: