ಬಂಟಕಲ್ಲು ಇಂಜಿನಿಯರಿಂಗ್ ಕಾಲೇಜಿನಲ್ಲಿ ರಾಷ್ಟ್ರೀಯ ಆವಿಷ್ಕಾರ ದಿನ ಆಚರಣೆ
ಬಂಟಕಲ್ಲು : ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಇನ್ನೊವೇಶನ್ ಕೌನ್ಸಿಲ್ ಮತ್ತು ಉದ್ಯಮಶೀಲತೆ ಅಭಿವೃದ್ಧಿ ಕೋಶದ ಸಹಯೋಗದೊಂದಿಗೆ ರಾಷ್ಟ್ರೀಯ ಆವಿಷ್ಕಾರ ದಿನವನ್ನು ಅಕ್ಟೋಬರ್ 16ರಂದು ವಿದ್ಯಾಸಂಸ್ಥೆಯಲ್ಲಿ ಆಚರಿಸಲಾಯಿತು.
ಕಾರ್ಯಕ್ರಮವನ್ನು ಎನ್ ಐ ಟಿ ಕೆ ಸುರತ್ಕಲ್‌ನ ರಸಾಯನಶಾಸ್ತ್ರ ವಿಭಾಗದ ಪ್ರೊಫೆಸರ್ ಡಾ. ಅರುಣ್ ಮೋಹನ್ ಇಸ್ಲೂರು ಉದ್ಘಾಟಿಸಿದರು.
ಇವರು ಉದ್ಯಮಶೀಲತೆ, ಉದ್ಯಮಿಗಳಿಗೆ ಅಗತ್ಯವಿರುವ ಶಿಸ್ತು, ಹೊಂದಿಕೊಳ್ಳುವಿಕೆ, ಸೃಜನಶೀಲತೆಯ ಬಗ್ಗೆ ತಿಳಿಸಿದರು. ಹಲವಾರು ಉದ್ಯಮಿಗಳ ಉದಾಹರಣೆಯೊಂದಿಗೆ ಕೌಶಲ್ಯ ಮತ್ತು ಕಠಿಣ ಪರಿಶ್ರಮದಿಂದ ಉದ್ಯಮಿಗಳು ತಮ್ಮ ಉದ್ಯೋಗದಲ್ಲಿ ಹೇಗೆ ಯಶಸ್ವಿಯಾಗಬಹುದೆಂದು ವಿವರವಾಗಿ ತಿಳಿಸಿದರು.
ಸಂಸ್ಥೆಯ ಉಪ ಪ್ರಾಂಶುಪಾಲರಾದ ಡಾ. ಗಣೇಶ್ ಐತಾಳ್ ವಿದ್ಯಾರ್ಥಿಗಳಿಗೆ ಕಾರ್ಯಕ್ರಮದ ಮಹತ್ವದ ಬಗ್ಗೆ ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ಪ್ರಾಂಶುಪಾಲರಾದ ಡಾ. ತಿರುಮಲೇಶ್ವರ ಭಟ್, ಡೀನ್, ವಿವಿಧ ವಿಭಾಗದ ಮುಖ್ಯಸ್ಥರು, ಪ್ರಾಧ್ಯಾಪಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಭೌತಶಾಸ್ತ್ರ ವಿಭಾಗದ ಪ್ರಾಧ್ಯಾಪಕಿ ಶ್ರೀಮತಿ ಉಷಾ ಪಾರ್ವತಿ ಅತಿಥಿಯನ್ನು ಪರಿಚಯಿಸಿದರು. ಗಣಕಯಂತ್ರ ವಿಭಾಗದ ಪ್ರಾಧ್ಯಾಪಕಿ ಸಹನಾ ಕಾರಂತ್ ಸ್ವಾಗತಿಸಿದರು. ಉದ್ಯಮಶೀಲತೆ ಅಭಿವೃದ್ಧಿ ಕೋಶದ ಸಂಯೋಜಕರಾದ ಡಾ. ಮಧುಕ ನಾಯಕ್ ವಂದಿಸಿದರು.
