ಪಡುಬಿದ್ರಿ ಬ್ಲೂ ಫ್ಲಾಗ್ ಬೀಚ್ ನಿರ್ವಹಣಾ ಸಮಿತಿ ಸಭೆ
Thumbnail
ಉಡುಪಿ : ಜಿಲ್ಲೆಯ ಪಡುಬಿದ್ರಿ ಬ್ಲೂ ಫ್ಲಾಗ್ ಬೀಚ್ ನಿರ್ವಹಣಾ ಸಮಿತಿ ಸಭೆ ಬುಧವಾರ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿಗಳ ಕೋರ್ಟ್ ಹಾಲ್ ಕಚೇರಿಯಲ್ಲಿ ನಡೆಯಿತು. ಸಭೆಯಲ್ಲಿ ಬ್ಲೂ ಫ್ಲಾಗ್ ಬೀಚ್ ನಲ್ಲಿ ಕಸ ವಿಲೇವಾರಿ ಸ್ವಚ್ಛತೆ ಮತ್ತು ಮೂಲ ಸೌಕರ್ಯ ಅಭಿವೃದ್ಧಿ ಬಗ್ಗೆ ಹಾಗೂ ಸಮರ್ಪಕವಾದ ಶುಲ್ಕ ವಸೂಲಾತಿ ಬಗ್ಗೆ ಜೊತೆಗೆ ವಾಟರ್ ಸ್ಪೋರ್ಟ್ಸ್ ಚಟುವಟಿಕೆ ಆರಂಭಿಸುವ ಬಗ್ಗೆ ಚರ್ಚಿಸಲಾಯಿತು. ಈ ಸಂದರ್ಭ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ ಶೆಟ್ಟಿ, ಜಿಲ್ಲಾಧಿಕಾರಿಗಳಾದ ವಿದ್ಯಾ ಕುಮಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಪ್ರಸನ್ನ ಎಚ್, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ್, ಕರಾವಳಿ ಪ್ರವಾಸೋದ್ಯಮ ಸಂಘಟನೆ ಅಧ್ಯಕ್ಷರಾದ ಮನೋಹರ್ ಶೆಟ್ಟಿ, ಸ್ಥಳೀಯ ಗ್ರಾಮ ಪಂಚಾಯತ್ ಅಧ್ಯಕ್ಷರು, ಸದಸ್ಯರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
18 Oct 2023, 02:39 PM
Category: Kaup
Tags: