ಉಡುಪಿ : ಪ್ಲಾಸ್ಟಿಕ್ ತ್ಯಾಜ್ಯ ಕಡಿಮೆ ಮಾಡುವುದು, ಮರುಬಳಕೆ, ಮರು ಉತ್ಪಾದನೆ ಬಗ್ಗೆ ಜಾಗೃತಿ ಅಭಿಯಾನ
ಉಡುಪಿ : ಆಕಾಶ್ ಬೈಜೂಸ್ ನ ಜಂಕ್ ದಿ ಪ್ಲಾಸ್ಟಿಕ್ ಅಭಿಯಾನ ಪ್ಲಾಸ್ಟಿಕ್ ತ್ಯಾಜ್ಯ ಕಡಿಮೆ ಮಾಡುವುದು, ಮರುಬಳಕೆ ಮತ್ತು ಮರು ಉತ್ಪಾದನೆ ಮಾಡುವ ಬಗ್ಗೆ ಜಾಗೃತಿ ಮೂಡಿಸುವ ಅಭಿಯಾನ ಉಡುಪಿಯಲ್ಲಿ ಜರಗಿತು.
ವಿದ್ಯಾರ್ಥಿಗಳಿಗೆ ಪ್ರಕೃತಿಯ ಬಗ್ಗೆ ಪ್ರೀತಿಯನ್ನು ಬೆಳೆಸಲು ನೆರವಾಗುವ ವಿಚಾರದಲ್ಲಿ ಉಡುಪಿಯನ್ನು ಸ್ವಚ್ಛಗೊಳಿಸಲು ಹಾಗೂ ನಮ್ಮ ಅದ್ಭುತ ನಗರ ನಿರ್ವಹಣೆಗೆ ಕೊಡುಗೆಯನ್ನು ನೀಡುವ ಭಾಗವಾಗಿರಲು ನಾವು ಸಂತೋಷ ಪಡುತ್ತೇವೆ ಎಂದು ಸಂಸ್ಥೆಯ ಮುಖ್ಯಸ್ಥರು ಹೇಳಿದರು.
ಮುಂಬರುವ ದಿನಗಳಲ್ಲಿ ದೇಶದ ಇತರ ಕರಾವಳಿ ನಗರಗಳಿಗೂ ಈ ಅಭಿಯಾನವನ್ನು ವಿಸ್ತರಣೆ ಮಾಡಲು ಆಕಾಶ್ ಬೈಜೂಸ್ ಉದ್ದೇಶಿಸಿದೆ. ಈ ನಿಟ್ಟಿನಲ್ಲಿ ಈಗಾಗಲೇ ಕಣ್ಣೂರು, ಕೋಝಿಕೋಡ್, ಚೆನ್ನೈ, ವಿಶಾಖಪಟ್ಟಣ, ಮುಂಬೈ, ಮತ್ತು ಪಣಜಿಯ ಕಡಲ ಕಿನಾರೆಗಳಲ್ಲಿ ಸ್ವಚ್ಛತಾ ಕಾರ್ಯಗಳನ್ನು ಕೈಗೊಳ್ಳಲಾಗಿದೆ ಎಂದರು.
ಈ ಸಂದರ್ಭದಲ್ಲಿ ಉಡುಪಿ ಮುನ್ಸಿಪಾಲ್ ಕಮಿಷನರ್ ರಾಯಪ್ಪ, ಆಕಾಶ್ ಬೈಜೂಸ್ ಸಂಸ್ಥೆಯ ಅನಿಲ್ ಕುಮಾರ, ಶ್ಯಾಮ್ ಪ್ರಸಾದ್, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
