ಕಾಪು : ಸವೋಚ್ಚ ನ್ಯಾಯಾಲಯದ ವಿಶ್ರಾಂತ ಮುಖ್ಯ ನ್ಯಾಯಮೂರ್ತಿ, ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಭೇಟಿ
Thumbnail
ಕಾಪು : ಸವೋಚ್ಚ ನ್ಯಾಯಾಲಯದ ವಿಶ್ರಾಂತ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ಮತ್ತು ಶಿವಮಾಲಾ ದಂಪತಿ ಹಾಗೂ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಲಲಿತಾ ಕನ್ನೆಗಂಟಿ ಅವರು ಶನಿವಾರ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀದೇವಿಯ ದರುಶನಗೈದು ಜೀರ್ಣೋದ್ಧಾರ ಕಾರ್ಯಗಳನ್ನು ವೀಕ್ಷಿಸಿದರು. ಅವರನ್ನು ಹುಲಿಕುಣಿತ ಮತ್ತು ಪೂರ್ಣಕುಂಭದೊಂದಿಗೆ ಸ್ವಾಗತಿಸಲಾಯಿತು. ದೇವಳದ ಪ್ರಧಾನ ತಂತ್ರಿಗಳಾದ ವಿದ್ವಾನ್ ಕುಮಾರಗುರು ತಂತ್ರಿ, ಪ್ರಧಾನ ಅರ್ಚಕರಾದ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯಾ ಇವರು ಪ್ರಾರ್ಥಿಸಿ ಮಾರಿಯಮ್ಮನ ಅನುಗ್ರಹ ಪ್ರಸಾದವನ್ನು ನೀಡಿದರು. ಕಾಪು ಶಾಸಕರು ಮತ್ತು ಜೀರ್ಣೋದ್ಧಾರ ಸಮಿತಿಯ ಕಾರ್ಯಾಧ್ಯಕ್ಷರಾದ ಗುರ್ಮೆ ಸುರೇಶ್ ಶೆಟ್ಟಿ, ಅಧ್ಯಕ್ಷರಾದ ಕೆ. ವಾಸುದೇವ ಶೆಟ್ಟಿ, ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ರಮೇಶ್ ಹೆಗ್ಡೆ ಕಲ್ಯಾ, ಕಾರ್ಯನಿರ್ವಹಣಾಧಿಕಾರಿ ರವಿಕಿರಣ್, ಜೀರ್ಣೋದ್ಧಾರ ಸಮಿತಿಯ ಗೌರವಾಧ್ಯಕ್ಷರಾದ ಅನಿಲ್ ಬಲ್ಲಾಳ್ ಕಾಪು ಬೀಡು, ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷರು ಮತ್ತು ಜೀರ್ಣೋದ್ಧಾರ ಸಮಿತಿಯ ಗೌರವ ಸಲಹೆಗಾರರಾದ ರತ್ನಾಕರ ಶೆಟ್ಟಿ ನಡಿಕೆರೆ, ನಿರ್ಮಲ್ ಕುಮಾರ್ ಹೆಗ್ಡೆ, ಜೀರ್ಣೋದ್ಧಾರ ಸಮಿತಿಯ ಉಪಾಧ್ಯಕ್ಷರುಗಳಾದ ಕಾಪು ದಿವಾಕರ ಶೆಟ್ಟಿ, ಮಾಧವ ಆರ್ ಪಾಲನ್, ಮನೋಹರ್ ಎಸ್ ಶೆಟ್ಟಿ, ಆರ್ಥಿಕ ಸಮಿತಿಯ ಪ್ರಧಾನ ಸಂಚಾಲಕರಾದ ಉದಯ ಸುಂದರ್ ಶೆಟ್ಟಿ, ಪ್ರಚಾರ ಸಮಿತಿಯ ಪ್ರಧಾನ ಸಂಚಾಲಕರಾದ ಯೋಗೀಶ್ ವಿ. ಶೆಟ್ಟಿ ಬಾಲಾಜಿ, ಆರ್ಥಿಕ ಸಮಿತಿಯ ಮುಖ್ಯ ಸಂಚಾಲಕರಾದ ರತ್ನಾಕರ ಹೆಗ್ಡೆ ಕಲ್ಯಾ ಬೀಡು, ರಮೇಶ್ ಶೆಟ್ಟಿ ಕಾಪು ಕೊಲ್ಯ, ಮೋಹನ್ ವಿ. ಶೆಟ್ಟಿ ಮುಂಬೈ, ಸಂದೀಪ್ ಶೆಟ್ಟಿ ಶಿರ್ವ, ಮುಂಬೈ, ಸಿ.ಎ ರವಿರಾಜ್ ಶೆಟ್ಟಿ, ಜಗದೀಶ್ ಶೆಟ್ಟಿ ನಂದಳಿಕೆ, ಮುಂಬೈ, ವ್ಯವಸ್ಥಾಪನಾ ಸಮಿತಿಯ ಸದಸ್ಯರುಗಳಾದ ಜಗದೀಶ್ ಬಂಗೇರ, ಬಾಬು ಮಲ್ಲಾರ್, ಗ್ರಾಮ ಸಮಿತಿಯ ಪ್ರಧಾನ ಸಂಚಾಲಕರಾದ ಜಿ. ಲೀಲಾಧರ ಶೆಟ್ಟಿ, ಅರುಣ್ ಶೆಟ್ಟಿ ಪಾದೂರು, ಕಚೇರಿ ನಿರ್ವಹಣಾ ಸಮಿತಿಯ ಪ್ರಧಾನ ಸಂಚಾಲಕರಾದ ಮಧುಕರ್ ಎಸ್, ಗೀತಾಂಜಲಿ ಎಮ್ ಸುವರ್ಣ, ವೀಣಾ ಶೆಟ್ಟಿ, ಪ್ರಚಾರ ಸಮಿತಿಯ ಸಂಚಾಲಕರಾದ ಜಯರಾಮ ಆಚಾರ್ಯ, ರಘುರಾಮ್ ಶೆಟ್ಟಿ ಕೊಪ್ಪಲಂಗಡಿ ಆರ್ಥಿಕ ಸಮಿತಿಯ 9 ತಂಡಗಳ ಮುಖ್ಯ ಸಂಚಾಲಕರು, ಸಂಚಾಲಕರುಗಳು, ವಿವಿಧ ಸಮಿತಿಯ ಸಂಚಾಲಕರುಗಳು, ದೇವಳದ ಸಿಬ್ಬಂದಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.
Additional image Additional image
21 Oct 2023, 07:46 PM
Category: Kaup
Tags: