ಕಾಪು : ದೇವಾಡಿಗರ ಸಂಘದ ನೂತನ ಕಟ್ಟಡಕ್ಕೆ ಗುದ್ದಲಿ ಪೂಜೆ
Thumbnail
ಕಾಪು : ದೇವಾಡಿಗರ ಸೇವಾ ಸಂಘ (ರಿ.) ಕಾಪು ಇದರ ನೂತನ ಕಟ್ಟಡದ ಗುದ್ದಲಿ ಪೂಜೆಯು ಭಾನುವಾರ ಜರಗಿತು. ಕಾಪು ಹೊಸ ಮಾರಿಗುಡಿ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ವಾಸುದೇವ ಶೆಟ್ಟಿ ದೇವಾಡಿಗರ ಸಂಘದ ನೂತನ ಕಟ್ಟಡ ನಿರ್ಮಾಣಕ್ಕೆ ಶುಭ ಹಾರೈಸಿ ರೂ.99,999 ನ್ನು ತನ್ನ ವೈಯುಕ್ತಿಕ ನೆಲೆಯಲ್ಲಿ ದೇಣಿಗೆ ನೀಡಿದರು. ಕಾಪು ದೇವಾಡಿಗರ ಸೇವಾ ಸಂಘದ ಅಧ್ಯಕ್ಷರಾದ ಗೋವರ್ಧನ್ ಸೇರಿಗಾರ್ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಈ‌ ಸಂದರ್ಭ ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಕಾಪು ಹೊಸ ಮಾರಿಗುಡಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ರಮೇಶ್ ಹೆಗ್ಡೆ ಕಲ್ಯ, ಕಾಪು ದೇವಾಡಿಗರ ಸೇವಾ ಸಂಘದ ಮಹಿಳಾ ಘಟಕದ ಅಧ್ಯಕ್ಷರಾದ ಸಾವಿತ್ರಿ ಸುಧಾಕರ, ಪುರಸಭಾ ಸದಸ್ಯರಾದ ಹರಿಣಾಕ್ಷಿ, ಅರುಣ್ ಶೆಟ್ಟಿ, ವಿದ್ಯಾಲತಾ, ಲಕ್ಷ್ಮಿ ಜನಾರ್ದನ ದೇವಸ್ಥಾನ ಆಡಳಿತಾಧಿಕಾರಿಗಳಾದ ಅರುಣ್, ಕಾಪು ದೇವಾಡಿಗರ ಸೇವಾ ಸಂಘದ ಪದಾಧಿಕಾರಿಗಳು ಮತ್ತು ಸರ್ವ ಸದಸ್ಯರು ಉಪಸ್ಥಿತರಿದ್ದರು.
22 Oct 2023, 01:14 PM
Category: Kaup
Tags: