ಕಾರ್ಕಳ ಶಾಸಕ ಸುನೀಲ್ ಕುಮಾರ್ : ಕಾಪು ಮಾರಿಗುಡಿ ಭೇಟಿ - ಕಾಮಗಾರಿ ವೀಕ್ಷಣೆ
ಕಾಪು : ಕರ್ನಾಟಕ ಸರಕಾರದ ಇಂಧನ ಮತ್ತು ಕನ್ನಡ ಸಂಸ್ಕೃತಿ ಇಲಾಖೆಯ ಮಾಜಿ ಸಚಿವರು ಮತ್ತು ಕಾರ್ಕಳ ಶಾಸಕರಾದ ಸುನೀಲ್ ಕುಮಾರ್ ದಂಪತಿ ಸೋಮವಾರ ಸಂಜೆ ಜೀರ್ಣೋದ್ಧಾರಗೊಳ್ಳುತ್ತಿರುವ ಕಾಪು ಹೊಸ ಮಾರಿಗುಡಿ ದೇವಳಕ್ಕೆ ಆಗಮಿಸಿ ಶ್ರೀದೇವಿಯ ದರುಶನವನ್ನು ಪಡೆದು, ಅಮ್ಮನ ಅನುಗ್ರಹ ಪ್ರಸಾದವನ್ನು ಸ್ವೀಕರಿಸಿದರು.
ನಂತರ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಕೆ.ವಾಸುದೇವ ಶೆಟ್ಟಿಯವರು ನಡೆಯುತ್ತಿರುವ ಕಾಮಗಾರಿ ಮತ್ತು ಸಮಗ್ರ ಜೀರ್ಣೋದ್ಧಾರದ ಬಗ್ಗೆ ಮಾಹಿತಿಯನ್ನು ನೀಡಿದರು.
ಈ ಸಂದರ್ಭ ಅವರು ಅಭಿವೃದ್ಧಿ ಸಮಿತಿಯ ಕಾರ್ಯಕ್ಕೆ ಶ್ಲಾಘನೆ ವ್ಯಕ್ತಪಡಿಸಿ, ಪ್ರಶಂಶಿಸಿ, ಕ್ಷೇತ್ರದ ಜೀರ್ಣೋದ್ಧಾರಕ್ಕೆ ಸಂಪೂರ್ಣ ಸಹಕಾರವನ್ನು ನೀಡುತ್ತೇನೆ ಎಂಬ ಭರವಸೆಯನ್ನು ನೀಡಿದರು.
ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ರಮೇಶ್ ಹೆಗ್ಡೆ ಕಲ್ಯ, ದೇವಿಪಾತ್ರಿ ಗುರುಮೂರ್ತಿ, ಪ್ರಚಾರ ಸಮಿತಿಯ ಪ್ರಧಾನ ಸಂಚಾಲಕರಾದ ಯೋಗೀಶ್ ವಿ. ಶೆಟ್ಟಿ ಬಾಲಾಜಿ, ವ್ಯವಸ್ಥಾಪನಾ ಸಮಿತಿಯ ಸದಸ್ಯರುಗಳಾದ ಜಗದೀಶ್ ಬಂಗೇರ, ಬಾಬು ಮಲ್ಲಾರ್, ಜೀರ್ಣೋದ್ಧಾರದ ಆರ್ಥಿಕ ಸಮಿತಿಯ ಕಾತ್ಯಾಯಿನಿ ತಂಡದ ಮುಖ್ಯ ಸಂಚಾಲಕರಾದ ಬೀನಾ ವಿ. ಶೆಟ್ಟಿ ಮತ್ತು ದೇವಳದ ಪ್ರಬಂಧಕರಾದ ಗೋವರ್ಧನ್ ಸೇರಿಗಾರ್ ಉಪಸ್ಥಿತರಿದ್ದರು.
