ಉಚ್ಚಿಲ : ಬಹುಭಾಷಾ ನಟ ಸುಮನ್ ತಲ್ವಾರ್ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಳ ಭೇಟಿ
ಉಚ್ಚಿಲ : ಮೊಗವೀರ ಮಹಾಜನ ಸಂಘ ಸಂಚಾಲಿತ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಮಂಗಳವಾರ ಖ್ಯಾತ ಬಹುಭಾಷಾ ನಟ ಸುಮನ್ ತಲ್ವಾರ್ ಭೇಟಿ ನೀಡಿದರು.
ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ರಾಘವೇಂದ್ರ ಉಪಾಧ್ಯಾಯರು ಪ್ರಸಾದ ವಿತರಿಸಿದರು. ದೇವಳದ ಪ್ರಧಾನ ಪ್ರಬಂಧಕ ಸತೀಶ್ ಅಮೀನ್ ಪಡುಕರೆ ಅವರು ದೇವಳದ ವತಿಯಿಂದ ಸುಮನ್ ತಲ್ವಾರ್ ರವರನ್ನು ಅಭಿನಂದಿಸಿದರು.
ಈ ಸಂದರ್ಭ ದೇವಳದ ಸಿಬ್ಬಂದಿ ವರ್ಗ, ಅರ್ಚಕ ವರ್ಗ ಉಪಸ್ಥಿತರಿದ್ದರು.
