ಪಡುಬಿದ್ರಿ : ಟ್ಯಾಂಕರ್ ಹರಿದು ಯುವಕ ಸಾವು
Thumbnail
ಪಡುಬಿದ್ರಿ : ಇಲ್ಲಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕೊಂದು ಟೂರಿಸ್ಟ್ ಬಸ್ಸಿಗೆ ಢಿಕ್ಕಿ ಹೊಡೆದು ಬೈಕಿನಲ್ಲಿದ್ದ ಯುವಕ ರಸ್ತೆಗೆ ಎಸೆಯಲ್ಪಟ್ಟು ಆತನ ಮೇಲೆ ಟ್ಯಾಂಕರ್ ಹರಿದ ಪರಿಣಾಮ ಸಾವನ್ನಪ್ಪಿದ ಘಟನೆ ಪಡುಬಿದ್ರಿ ಪೇಟೆಯಲ್ಲಿ ಇಂದು ಸಂಜೆ ನಡೆದಿದೆ. ಮೃತನನ್ನು ಕಂಚಿನಡ್ಕ ನಿವಾಸಿ ಪ್ರಜ್ವಲ್ ಎಂದು ಗುರುತಿಸಲಾಗಿದೆ. ಇಲ್ಲಿನ ಮಂಗಳೂರು ಕಡೆಗೆ ತೆರಳುವ ಬಸ್ಸು ನಿಲ್ದಾಣದ ಬಳಿ ಹೆದ್ದಾರಿಯಲ್ಲಿ ಖಾಸಗಿ ಟೂರಿಸ್ಟ್ ಬಸ್ಸು ನಿಲ್ಲಿಸಿದ ವೇಳೆ ಹಿಂಬದಿಯಲ್ಲಿದ್ದ ಬೈಕ್ ಬಸ್ಸಿಗೆ ಢಿಕ್ಕಿ ಹೊಡೆದು ರಸ್ತೆಗೆ ಎಸೆಯಲ್ಪಟ್ಟಿದ್ದನು. ಇದೇ ವೇಳೆ ಟ್ಯಾಂಕರ್ ಆತನ ಮೇಲೆ ಹರಿದ ಪರಿಣಾಮ ಟ್ಯಾಂಕರ್ ಚಕ್ರದಡಿಗೆ ಸಿಲುಕಿ ಸ್ಥಳದಲ್ಲೇ ಮೃತಪಟ್ಟನು. ಪಡುಬಿದ್ರಿ ಪೊಲೀಸರು ಸ್ಥಳಕ್ಕೆ ಧಾವಿಸಿ ಸ್ಥಳಪರಿಶೀಲನೆ ನಡೆಸಿದ್ದಾರೆ.
03 Nov 2023, 08:46 PM
Category: Kaup
Tags: