ಉಚ್ಚಿಲ : ಯುವವಾಹಿನಿ ಪಡುಬಿದ್ರಿ ಘಟಕ - ಸರಸ್ವತಿ ಮಂದಿರ ಶಾಲೆಯಲ್ಲಿ ಮಕ್ಕಳ ಹಬ್ಬ
ಉಚ್ಚಿಲ : ಶಾಲಾ ಹಂತದಲ್ಲಿ ಪಠ್ಯದ ಜೊತೆಗೆ ಪಠ್ಯ ಪೂರಕ ಚಟುವಟಿಕೆಗಳು ಮಕ್ಕಳ ಕಲಿಕೆಗೆ ಪೂರಕವಾಗಿದೆ. ಜೀವನದಲ್ಲಿ ಮಾಧ್ಯಮ ಮುಖ್ಯವಾಗದು. ಕನ್ನಡ ಮಾಧ್ಯಮದಲ್ಲಿಯೂ ಕಲಿತವರು ಸಾಧನೆಯ ಹಂತ ತಲುಪಿದ್ದಾರೆ. ಕಳೆದ ಹಲವು ವರ್ಷಗಳಿಂದ ಮಕ್ಕಳಿಗೆ ಶೈಕ್ಷಣಿಕ, ಸಾಂಸ್ಕೃತಿಕ ಚಟುವಟಿಕೆಗಳನ್ನು ಹಮ್ಮಿಕೊಂಡು ಬರತ್ತಿರುವ ಪಡುಬಿದ್ರಿ ಯುವವಾಹಿನಿ ಘಟಕದ ಕಾರ್ಯ ಶ್ಲಾಘನೀಯ ಎಂದು ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಹರೀಶ್ ಕುಮಾರ್ ಹೆಜಮಾಡಿ ಹೇಳಿದರು.
ಅವರು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಪಡುಬಿದ್ರಿ ಘಟಕದ ವತಿಯಿಂದ ಉಚ್ಚಿಲ ಸರಸ್ವತಿ ಮಂದಿರ ಶಾಲೆಯಲ್ಲಿ ರವಿವಾರ ಜರಗಿದ ಮಕ್ಕಳ ಹಬ್ಬ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.
ಕಾರ್ಯಕ್ರಮವನ್ನು ಉಚ್ಚಿಲ ಸರಸ್ವತಿ ಮಂದಿರ ಶಾಲೆಯ ಪ್ರಾಥಮಿಕ ಶಾಲಾ ವಿದ್ಯಾರ್ಥಿ ನಾಯಕ ಶಿಖರ್ ಮತ್ತು ಹೈಸ್ಕೂಲ್ ವಿಭಾಗದ ವಿದ್ಯಾರ್ಥಿ ನಾಯಕಿ ತಮೀಮಾ ಉದ್ಘಾಟಿಸಿದರು.
ಈ ಸಂದರ್ಭ ಮಕ್ಕಳಿಗಾಗಿ ನಡೆದ ವಿವಿಧ ಸ್ಪರ್ಧೆಗಳಿಗೆ ಚಾಲನೆ ನೀಡಲಾಯಿತು.
ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ಅಶ್ವಥ್ ಎಸ್ ವಹಿಸಿದ್ದರು.
ಈ ಸಂದರ್ಭ ಪ್ರಾಥಮಿಕ ಶಾಲಾ ವಿಭಾಗದ ಸಂಚಾಲಕ ಮೋಹನ್ ದಾಸ್ ಶೆಟ್ಟಿ, ಪ್ರಾಥಮಿಕ ಶಾಲಾ ಪ್ರಭಾರ ಮುಖ್ಯ ಶಿಕ್ಷಕಿ ಗೀತಾ ವೈ., ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕ ಬಾಬುರಾಯ ಆಚಾರ್ಯ, ಪ್ರೌಢಶಾಲಾ ವಿಭಾಗದ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಆಶಾ, ಪ್ರಾಥಮಿಕ ವಿಭಾಗದ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಕಲಾವತಿ, ಪಡುಬಿದ್ರಿ ಘಟಕದ ಕಲಾ ಮತ್ತು ಸಾಹಿತ್ಯ ನಿರ್ದೇಶಕರಾದ ಸಂತೋಷ್ ಕರ್ನಿರೆ, ಕಾರ್ಯದರ್ಶಿ ನಿಖಿಲ್ ಪೂಜಾರಿ ಪೂಜಾರಿ ಉಪಸ್ಥಿತರಿದ್ದರು.
ಪಡುಬಿದ್ರಿ ಘಟಕದ ಕಲಾ ಮತ್ತು ಸಾಹಿತ್ಯ ನಿರ್ದೇಶಕರಾದ ಸಂತೋಷ್ ಕರ್ನಿರೆ ಸ್ವಾಗತಿಸಿದರು. ಕಾರ್ಯಕ್ರಮವನ್ನು ವಿಧಿತ್ ಮತ್ತು ಪವಿತ್ರ ನಿರೂಪಿಸಿದರು. ಕಾರ್ಯದರ್ಶಿ ನಿಖಿಲ್ ಪೂಜಾರಿ ಪೂಜಾರಿ ವಂದಿಸಿದರು.
