ಮಟ್ಟಾರು : 11 ನೇ ವರ್ಷದ ಸಾರ್ವಜನಿಕ ಗೋಪೂಜೆ, ವಾಹನ ಪೂಜೆ
Thumbnail
ಮಟ್ಟಾರು : ವಿಶ್ವ ಹಿಂದೂ ಪರಿಷದ್ ಬಜರಂಗದಳ ಮಾತೃಶಕ್ತಿ ದುರ್ಗಾವಾಹಿನಿ ಮಟ್ಟಾರು ನೇತೃತ್ವದಲ್ಲಿ 11 ನೇ ವರ್ಷದ ಸಾರ್ವಜನಿಕ ಗೋಪೂಜೆ ಮತ್ತು ವಾಹನ ಪೂಜೆ ನಡೆಯಿತು. ವಿಷ್ಣುಮೂರ್ತಿ ಉಪಾಧ್ಯಾಯರ ಮುಂದಾಳುತ್ವದಲ್ಲಿ ಗೋಪೂಜೆ ಮತ್ತು ವಾಹನ ಪೂಜೆ ನಡೆಯಿತು. ನವೆಂಬರ್ 5 ರಂದು ಜರಗಿದ ಕ್ರೀಡಾಕೂಟದ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ನಿವೃತ್ತ ಅಧ್ಯಾಪಕರಾದ ಭಾಸ್ಕರ ಶೆಟ್ಟಿ ಬೆಳೆಂಜಾಲೆ ಸಭಾಧ್ಯಕ್ಷತೆ ವಹಿಸಿದ್ದರು. ಉಡುಪಿ ಶಾಸಕರಾದ ಯಶಪಾಲ್ ಸುವರ್ಣ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ, ಅರ್ಚಕ ವಿಷ್ಣುಮೂರ್ತಿ ಉಪಾಧ್ಯಾಯ, ಬಜರಂಗದಳ ಕಾಪು ಪ್ರಖಂಡ ಗೋರಕ್ಷಾ ಪ್ರಮುಖ್ ಅಭಿನಂದನ್ ಪಡುಬಿದ್ರಿ, ಶಿರ್ವ ವಲಯ ಸಂಚಾಲಕ ವಿಶ್ವನಾಥ ಆಚಾರ್ಯ, ವಿಶ್ವ ಹಿಂದು ಪರಿಷದ್ ಮಟ್ಟಾರು ಅಧ್ಯಕ್ಷ ಜಗದೀಶ ಆಚಾರ್ಯ, ಕೋಶಾಧಿಕಾರಿ ಅಜಿತ್ ಪೂಜಾರಿ, ಮಾತೃಶಕ್ತಿ ಪ್ರಮುಖ್ ಸುಮತಿ ಸಾಲ್ಯಾನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ರಂಜಿತ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಜಯಪ್ರಕಾಶ್ ಪ್ರಭು ಸ್ವಾಗತಿಸಿ, ವಂದಿಸಿದರು.
13 Nov 2023, 05:11 PM
Category: Kaup
Tags: