ಉಡುಪಿ ಜಿಲ್ಲೆಯ ನೇಜಾರು ಪ್ರಕರಣ : ಕೊಲೆಗಾರನನ್ನು ಆದಷ್ಟು ಬೇಗ ಬಂಧಿಸಿ ನ್ಯಾಯ ಒದಗಿಸಬೇಕು - ರಮೀಜ್ ಹುಸೇನ್
Thumbnail
ಉಡುಪಿ : ಜಿಲ್ಲೆಯ ನೇಜಾರುನಲ್ಲಿ ನಡೆದ ಅಮಾನವೀಯ ಕೊಲೆ ಘಟನೆ ಮನುಷ್ಯತ್ವವನ್ನು ಮರೆ ಮಾಚುವಂತಾಗಿದೆ. ಜಿಲ್ಲೆಯಲ್ಲಿ ನಡೆದ ಈ ಕೂಲೆ ಘಟನೆ ಎಲ್ಲರನ್ನು ನಿಬ್ಬೆರಗಾಗುವಂತೆ ಮಾಡಿದೆ. ತಾಯಿ ಮಕ್ಕಳನ್ನು ಕೊಂದು ಮರೆಯಾದ ಕೊಲೆಗಾರನನ್ನು ಆದಷ್ಟು ಬೇಗ ಬಂಧಿಸಿ ನ್ಯಾಯ ಒದಗಿಸಬೇಕು ಎಂದು ಕಾಪು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ‌ರಮೀಜ್ ಹುಸೇನ್ ಆಗ್ರಹಿಸಿದ್ದಾರೆ. ಈ ಘಟನೆಯನ್ನು ವಿಶೇಷವಾಗಿ ಪರಿಗಣಿಸಿ ಜಿಲ್ಲಾ ಪೋಲೀಸ್ ವರಿಷ್ಟಾಧಿಕಾರಿಯವರು ನೇತೃತ್ವ ವಹಿಸಿ ಮೃತರ ಕುಟುಂಬಕ್ಕೆ ನ್ಯಾಯ ಒದಗಿಸಬೇಕು. ದೇಶ ಜನ ದೀಪಾವಳಿ ಸಂಭ್ರಮಾಚರಣೆಯ ಸಂದರ್ಭದಲ್ಲಿ ಬೆಳ್ಳಂಬೆಳಿಗ್ಗೆ ಒಂದೇ ಮನೆಯ ತಾಯಿ ಹಾಗು ಮೂರು ಮಕ್ಕಳನ್ನು ಕೊಂದು ಹಾಕಿದ್ದು ದು:ಖಕರವಾಗಿದೆ. ಈ ಘಟನೆಯಿಂದ ಜಿಲ್ಲೆಯ ಜನತೆ ದು:ಖಿಸುವಂತೆ ಮಾಡಿದೆ.‌ ಮನುಷ್ಯನ ಜೀವಕ್ಕೆ ಬೆಲೆ ಇಲ್ಲದ ರೀತಿಯಾಗಿದ್ದು ಜನತೆ ಭಯದ ವಾತಾವರಣದಲ್ಲಿ ಬದುಕುವಂತಾಗಿದೆ. ಘಟನೆ ನಡೆದು ಎರಡು ದಿನ ಕಳೆದರೂ ಆರೋಪಿ ಪತ್ತೆಯಾಗದಿರುವುದರಿಂದ ಈ ಘಟನೆಯನ್ನು ಸರಕಾರ ಗಂಭೀರವಾಗಿ ಪರಿಗಣಿಸಿ ಕೊಲೆಗಾರನನ್ನು ಬಂಧಿಸಿ, ತನಿಖೆ ನಡೆಸಿ ನ್ಯಾಯ ಒದಗಿಸಿ, ಮುಂದೆ ಈ ರೀತಿಯ ಘಟನೆಯ ನಡೆಯದಂತೆ ಕಠಿಣ ಕಾನೂನು ಕ್ರಮ ಜಾರಿಯಾಗಬೇಕು ಎಂದು ಸರಕಾರಕ್ಕೆ ಮನವಿ ಮಾಡಿದ್ದಾರೆ.
14 Nov 2023, 07:45 AM
Category: Kaup
Tags: