ಕಾರ್ಕಳ : ಬ್ರೈಟ್ ಗ್ರೂಪ್ ಫ್ರೆಂಡ್ಸ್ ಸೂಡ - 9 ನೇ ವರ್ಷದ ಅಶ್ವತ್ಥ ಪೂಜೆ, ಸಾಮೂಹಿಕ ಗೋ ಪೂಜೆ
ಕಾರ್ಕಳ : ಬ್ರೈಟ್ ಗ್ರೂಪ್ ಫ್ರೆಂಡ್ಸ್ (ರಿ.) ಸೂಡ ಇವರ ವತಿಯಿಂದ ಒಂಬತ್ತನೇ ವರ್ಷದ ಅಶ್ವತ್ಥ ಪೂಜೆ, ಸಾಮೂಹಿಕ ಗೋ ಪೂಜೆಯು ಸೂಡ ಸುಬ್ರಹ್ಮಣ್ಯ ಅನುದಾನಿತ ಶಾಲಾ ಬಳಿಯ ಅಶ್ವತ್ಥ ವೃಕ್ಷದ ಬಳಿ, ಸೂಡ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಅರ್ಚಕರಾದ ಶ್ರೀಶ ಭಟ್ ರವರ ನೇತೃತ್ವದಲ್ಲಿ ಶ್ರೀ ವಿಷ್ಣುಸಹಸ್ರನಾಮ ಮತ್ತಿತರ ಧಾರ್ಮಿಕ ಕಾರ್ಯಗಳೊಂದಿಗೆ ನೆರವೇರಿತು.
ಗ್ರಾಮಸ್ಥರು ತಮ್ಮ ಗೋ ಮಾತೆಯೊಂದಿಗೆ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿ, ಗೋ ಮಾತೆಗೆ ಕಡುಬು, ಬಾಳೆ ಹಣ್ಣು, ಹಿಂಡಿ ತಿನ್ನಿಸುವುದರೊಂದಿಗೆ ನಮಸ್ಕರಿಸಿ ಪ್ರಸಾದ ಸ್ವೀಕರಿಸಿದರು.
ಬಳಿಕ ಸೂಡ ಸರಕಾರಿ ಪ್ರೌಢ ಶಾಲಾ ಮುಂಬಾಗದ ಮೈದಾನದಲ್ಲಿ ಸಾಮೂಹಿಕ ವಾಹನ ಪೂಜೆಯನ್ನು ನೆರವೇರಿಸಲಾಯಿತು.
ರಾಜೇಶ್ ಭಟ್, ವಸುಧೀಶ್ ಭಟ್, ವಿಭುಧೇಶ್ ಭಟ್ ರವರು ಪೂಜಾ ಕಾರ್ಯದಲ್ಲಿ ಸಹಕರಿಸಿದರು.
ಸಂಘದ ಅಧ್ಯಕ್ಷರಾದ ರವಿರಾಜ್ ಕುಲಾಲ್, ಕಾರ್ಯದರ್ಶಿ ರೋಶನ್, ಮತ್ತು ಸರ್ವ ಸದಸ್ಯರು, ಜನನಿ ಮಹಿಳಾ ಮಂಡಳಿ ಸೂಡ ಇದರ ಅಧ್ಯಕ್ಷೆ ವಿದ್ಯಾಲಕ್ಷ್ಮಿ ಆರ್ ಭಟ್, ಗೌರವಾಧ್ಯಕ್ಷೆ ದೀಪಿಕಾ ಅಶೋಕ್ ಮತ್ತು ಸದಸ್ಯರು ಉಪಸ್ಥಿತರಿದ್ದರು.
