ಕೇರಳ ರಾಜ್ಯದ 2023 ರ ಗಡಿನಾಡ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ದಿವಾಕರ ಬಿ ಶೆಟ್ಟಿ ಕಳತ್ತೂರು
Thumbnail
ಕೇರಳ ರಾಜ್ಯ ಕಾಸರಗೋಡುನಲ್ಲಿ ನಡೆದ ಗಡಿನಾಡ ಸಾಹಿತ್ಯ ಅಕಾಡೆಮಿ (ರಿ.) ಕಾಸರಗೋಡು ಇವರ ಆಶ್ರಯದಲ್ಲಿ ನಡೆದ 2023 ರ ಗಡಿನಾಡ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಕಳತ್ತೂರು ದಿವಾಕರ ಬಿ ಶೆಟ್ಟಿ ಪುರಸ್ಕೃತರಾಗಿದ್ದಾರೆ. ಪತ್ರಿಕೋದ್ಯಮ ಹಾಗೂ ಸಮಾಜ ಸೇವಾ ಕ್ಷೇತ್ರದಲ್ಲಿ ಇವರ ಸಾಧನೆಯನ್ನು ಕಂಡು ಈ ಪ್ರಶಸ್ತಿ ನೀಡಿದ್ದಾರೆ ಪ್ರಶಸ್ತಿಯನ್ನು ಕೇಂದ್ರದ ಮಾಜಿ ಸಚಿವರಾದ ಪ್ರಸ್ತುತ ಸಂಸದರಾದ ರಮೇಶ್ ಚಂದ್ರಪ್ಪ ಜಿಗಜಿಣಗಿ ಇವರು ಪ್ರಶಸ್ತಿ ವಿತರಿಸಿದರು. ಈ ಸಂದರ್ಭದಲ್ಲಿ ಕರ್ನಾಟಕ ಸರಕಾರದ ಮುಖ್ಯಮಂತ್ರಿಯವರ ಮಾಧ್ಯಮ ಕಾರ್ಯದರ್ಶಿ ಕೆ.ವಿ ಪ್ರಭಾಕರ ,ಒಡಿಯೂರು ಸಂಸ್ಥಾನದ ಸಾದ್ವಿ ಮಾತಾನಂದಮಾಯಿ ಶ್ರೀ ಕ್ಷೇತ್ರ ಓಡಿಯೂರು, ಮಂಜೇಶ್ವರ ಶಾಸಕರಾದ ಕೆ. ಎಂ ಅಶ್ರಫ್, ಗಡಿನಾಡ ಸಾಹಿತ್ಯ ಅಕಾಡೆಮಿ(ರಿ.) ಇದರ ಸ್ಥಾಪಕಧ್ಯಕ್ಷರಾದ ಎಸ್ ಪ್ರದೀಪ್ ಕಲ್ಕೂರ, ಗಡಿನಾಡ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಚಣಿಯಪ್ಪ ನಾಯ್ಕ್ ಏನ್, ಕಾರ್ಯದರ್ಶಿ ಅಖಿಲೇಶ್ ನಗುಮುಗಮ್, ಕೋಶಾಧಿಕಾರಿ ಝೆಡ್ ಎ ಕಯ್ಯಾರ್ ಮತ್ತಿತರರು ಉಪಸ್ಥಿತರಿದ್ದರು.
22 Nov 2023, 07:57 PM
Category: Kaup
Tags: