ಕುತ್ಯಾರು : ಸೂರ್ಯ ಚೈತನ್ಯ ಗ್ಲೋಬಲ್ ಅಕಾಡೆಮಿ ಸ್ಕೂಲ್ - ಇಂಗ್ಲೀಷ್ ಭಾಷಾ ಶಿಕ್ಷಕರ ಕಾರ್ಯಾಗಾರ
Thumbnail
ಕುತ್ಯಾರು : ವಿದ್ಯಾಭಾರತಿ ಕರ್ನಾಟಕ ಉಡುಪಿ ಜಿಲ್ಲೆ ಆಯೋಜಿಸಿದ ಜಿಲ್ಲಾ ಮಟ್ಟದ ಪ್ರಶಿಕ್ಷಣ ವರ್ಗ ದ್ವಿತೀಯ ಭಾಷೆ ಇಂಗ್ಲೀಷ್ ಕಾರ್ಯಾಗಾರ ಸೂರ್ಯ ಚೈತನ್ಯ ಗ್ಲೋಬಲ್ ಅಕಾಡೆಮಿ ಸ್ಕೂಲ್ ಕುತ್ಯಾರು ಇಲ್ಲಿ ನಡೆಯಿತು. ವಿದ್ಯಾಭಾರತಿ ಕರ್ನಾಟಕ ಉಡುಪಿ ಜಿಲ್ಲೆಯ ಸದಸ್ಯರಾದ ಶ್ರೀಕಾಂತ ಪ್ರಭು ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಅವರು, ತರಬೇತಿ ಶಿಕ್ಷಕರಿಗೆ ಅನಿವಾರ್ಯವಾಗಿದೆ ಶಿಕ್ಷಕರು ವಿದ್ಯಾರ್ಥಿಗಳಲ್ಲಿ ಸಂತೋಷವನ್ನುಂಟು ಮಾಡಲು ವಿದ್ಯಾರ್ಥಿಗಳು ಸಂತೋಷದಾಯಕವಾಗಿ ಇರಲು ಶಿಕ್ಷಕರು ಸಂಪತ್ಭರಿತವಾಗಿರಬೇಕು ಎಂದರು. ಸೂರ್ಯ ಚೈತನ್ಯ ಗ್ಲೋಬಲ್ ಅಕಾಡೆಮಿ ಸ್ಕೂಲ್ ಶೈಕ್ಷಣಿಕ ಆಡಳಿತ ಅಧಿಕಾರಿ ದಿವಾಕರ ಆಚಾರ್ಯ ಮಾತನಾಡಿ ತರಬೇತಿಯಿಂದ ಶಿಕ್ಷಕರು ಸಂಪನ್ಮೂಲ ವ್ಯಕ್ತಿಗಳಾಗಲು ಸಾಧ್ಯ. ತರಬೇತಿಯಿಂದ ಶಿಕ್ಷಕರು ಹಲವಾರು ವಿಧದ ಜ್ಞಾನವನ್ನು ಕೌಶಲವನ್ನು ಪಡೆಯುವುದಕ್ಕೆ ಸಾಧ್ಯ. ಶಿಕ್ಷಕರು ನಿರಂತರವಾಗಿ ತರಬೇತಿಯನ್ನು ಪಡೆಯುವುದರಿಂದ ಬೋಧನೆಯಲ್ಲಿ ಗುಣಮಟ್ಟವನ್ನ ಕಾಯ್ದುಕೊಳ್ಳುವಲ್ಲಿ ಸಾಧ್ಯವಾಗುತ್ತದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸೂರ್ಯ ಚೈತನ್ಯ ಗ್ಲೋಬಲ್ ಅಕಾಡೆಮಿ ಶಾಲೆಯ ಆಡಳಿತ ಮಂಡಳಿ ಉಪಾಧ್ಯಕ್ಷರಾದ ವಿವೇಕ್ ಆಚಾರ್ಯ ವಹಿಸಿದ್ದರು. ಈ ಸಂದರ್ಭ ಸೂರ್ಯ ಚೈತನ್ಯ ಗ್ಲೋಬಲ್ ಅಕಾಡೆಮಿ ಸ್ಕೂಲ್ ಶೈಕ್ಷಣಿಕ ಆಡಳಿತ ಅಧಿಕಾರಿ ದಿವಾಕರ ಆಚಾರ್ಯ, ಮುಖ್ಯ ಶಿಕ್ಷಕಿ ಸಂಗೀತ, ವಿದ್ಯಾಭಾರತಿ ಜಿಲ್ಲೆಯ ಕಾರ್ಯದರ್ಶಿ ಮಹೇಶ್ ಹೈಕಾಡಿ ಉಪಸ್ಥಿತರಿದ್ದರು. ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಆನೆಗುಂದಿ ಸರಸ್ವತಿ ಪೀಠ ಕಾರ್ಯದರ್ಶಿ ಗುರುರಾಜ್ ಆಚಾರ್ಯ ವಹಿಸಿದ್ದರು. ಕಾರ್ಯಗಾರದಲ್ಲಿ12 ಸಂಸ್ಥೆಗಳ ದ್ವಿತೀಯ ಭಾಷೆ ಇಂಗ್ಲಿಷ್ ನ 22 ಶಿಕ್ಷಕರು ಭಾಗವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಸವಿತಾ ಸಹಕರಿಸಿದ್ದರು. ಶಿಕ್ಷಕಿ ಅನಿತಾ ಸ್ವಾಗತಿಸಿದರು. ಉಡುಪಿ ಜಿಲ್ಲೆಯ ವಿದ್ಯಾಭಾರತಿ ಕಾರ್ಯದರ್ಶಿ ಮಹೇಶ್ ಹೈಕಾಡಿ ಪ್ರಸ್ತಾವನೆಗೈದರು. ಶಿಕ್ಷಕಿಯರಾದ ರಮ್ಯ ನಿರೂಪಿಸಿ, ಶರೋನ್ ವಂದಿಸಿದರು.
Additional image Additional image
29 Nov 2023, 01:34 PM
Category: Kaup
Tags: