ಬಂಟಕಲ್ಲು ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರ ಉದ್ಘಾಟನೆ
ಬಂಟಕಲ್ಲು : ರಾಷ್ಟ್ರೀಯ ಸೇವಾ ಯೋಜನೆಯು ವಿದ್ಯಾರ್ಥಿಗಳಿಗೆ ಸಮುದಾಯದ ಅಭಿವೃದ್ಧಿ ಕಾರ್ಯಗಳಲ್ಲಿ ಅವಕಾಶವನ್ನು ನೀಡುತ್ತದೆ ಮತ್ತು ಶಿಕ್ಷಣ ಹೊರತುಪಡಿಸಿ ಹೊರಗಿನ ಜೀವನದ ಬಗ್ಗೆ
ಅನುಭವವನ್ನು ಪಡೆಯಲು ಅವಕಾಶ ಕಲ್ಪಸುತ್ತದೆ. ಅಲ್ಲದೆ ರಾಷ್ಟ್ರೀಯ ಸೇವಾ ಯೋಜನೆಯು ವಿದ್ಯಾರ್ಥಿಗಳಿಗೆ ಶಿಸ್ತು, ಸೇವಾ ಮನೋಭಾವ ಮತ್ತು ನಾಯಕತ್ವ ಕೌಶಲ್ಯವನ್ನು ತಿಳಿಸಿಕೊಡುತ್ತದೆ ಎಂದು ಉಡುಪಿಯ ಎಂಜಿಎಮ್ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥರು ಮತ್ತು ಎನ್ ಎಸ್ ಎಸ್ ಕಾರ್ಯಕ್ರಮ ಅಧಿಕಾರಿಯಾದ ಸುಚಿತ್ ಕೋಟ್ಯಾನ್ ಹೇಳಿದರು.
ಅವರು ಬಂಟಕಲ್ಲು ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದ ಆವರಣದಲ್ಲಿ ನವೆಂಬರ್ 27 ರಂದು ನಡೆದ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.
ಸಂಸ್ಥೆಯ ಪ್ರಾಂಶುಪಾಲರಾದ ಡಾ. ತಿರುಮಲೇಶ್ವರ ಭಟ್ ಈ ಶಿಬಿರವನ್ನು ಆಯೋಜಿಸಿದಕ್ಕಾಗಿ ಹರ್ಷ
ವ್ಯಕ್ತಪಡಿಸಿದರು ಮತ್ತು ವಿದ್ಯಾರ್ಥಿಗಳು ಈ ಶಿಬಿರದ ಸಂಪೂರ್ಣ ಪ್ರಯೋಜನವನ್ನು ಪಡೆಯುವಂತೆ ತಿಳಿಸಿದರು.
ಇದೇ ಸಂದರ್ಭದಲ್ಲಿ ಸಂವಿಧಾನ ದಿನದ ಅಂಗವಾಗಿ ಪ್ರಮಾಣ ವಚನ ಸ್ವೀಕರಿಸುವ ಸಮಾರಂಭವನ್ನು ಆಯೋಜಿಸಲಾಗಿತ್ತು. ಅತಿಥಿಗಳಾದ ಸುಚಿತ್ ಕೋಟ್ಯಾನ್ ಪ್ರಮಾಣ ವಚನವನ್ನು ವಾಚಿಸಿದರು.
ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ಉಪ ಪ್ರಾಂಶುಪಾಲರಾದ ಡಾ. ಗಣೇಶ್ ಐತಾಳ್, ಡೀನ್, ವಿವಿಧ ವಿಭಾಗದ ಮುಖ್ಯಸ್ಥರು, ಪ್ರಾಧ್ಯಾಪಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಾದ ನಿಧಿ ಪಾಟ್ಕರ್ ಸ್ವಾಗತಿಸಿದರು. ಸುರಭಿ ಪ್ರಾರ್ಥಿಸಿದರು. ಅಕ್ಷತಾ ಅತಿಥಿಗಳನ್ನು ಪರಿಚಯಿಸಿದರು. ಅನನ್ಯ ಕಾರ್ಯಕ್ರಮ ನಿರೂಪಿಸಿದರು. ಧನುಷ್ ಶಾಸ್ತ್ರಿ ವಂದಿಸಿದರು.
