ಪಡುಬಿದ್ರಿ ಶ್ರೀ ಬಾಲಗಣಪತಿ ಪ್ರಸನ್ನ ಪಾರ್ವತಿ ದೇವಸ್ಥಾನದ ವಠಾರದಲ್ಲಿ ಕೃಷಿ ಮೇಳಕ್ಕೆ ಚಾಲನೆ
ಪಡುಬಿದ್ರಿ : ಇಲ್ಲಿನ ಶ್ರೀ ಬಾಲಗಣಪತಿ ಪ್ರಸನ್ನ ಪಾರ್ವತಿ ದೇವಸ್ಥಾನ ಹಾಗೂ ಕೃಷಿ ಮತ್ತು ತೋಟಗಾರಿಕೆ ಇಲಾಖೆಯ ಜಂಟಿ ಸಹಯೋಗದೊಂದಿಗೆ ಶನಿವಾರ ಬೆಳಿಗ್ಗೆ ಪಡುಬಿದ್ರಿಯ ಶ್ರೀ ಬಾಲಗಣಪತಿ ಪ್ರಸನ್ನ ಪಾರ್ವತಿ ದೇವಸ್ಥಾನದ ವಠಾರದಲ್ಲಿ ಪ್ರಥಮ ಬಾರಿಗೆ ಜರಗಿದ ಕೃಷಿ ಮೇಳವನ್ನು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟಿಸಿದರು.
ಈ ಸಂದರ್ಭ ಮಾತನಾಡಿದ ಅವರು, ಹಿಂದೆ ನಮ್ಮ ದೇಶ ಕೃಷಿ ಪ್ರಧಾನ ದೇಶವಾಗಿತ್ತು. ಕಾಲ ಬದಲಾದಂತೆ ನಾವು ಕೂಡಾ ಬದಲಾಗಿದ್ದೇವೆ. ಇತ್ತೀಚಿನ ದಿನಗಳಲ್ಲಿಯುವಕರು ಕೃಷಿಯತ್ತ ಮುಖ ಮಾಡಿರುವುದು ಸಂತಸದ ಸಂಗತಿ. ಇಂತಹ ಕೃಷಿ ಮೇಳವು ಕೃಷಿಕರ ಬಾಳಿಗೆ ನಂದಾದೀಪವಾಗಲಿ ಎಂದು ಹಾರೈಸಿದರು.
ಮೂಡುಬಿದಿರೆ ಜೈನ ಮಠದ ಭಾರತಭೂಷಣ ಡಾ. ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಸ್ವಾಮೀಜಿ ಆಶೀರ್ವಚಿಸಿದರು.
ಈ ಸಂದರ್ಭ ಸ್ಥಳೀಯ ಐವರು ಸಾಧಕ ಕೃಷಿಕರಿಗೆ ಕೃಷಿ ಋಷಿ ಸಮ್ಮಾನ ಪತ್ರ ನೀಡಿ ಅಭಿನಂದಿಸಲಾಯಿತು.
ಕೃಷಿ ಮೇಳದ ಅಧ್ಯಕ್ಷರಾದ ಶಶಿಕಾಂತ್ ಪಡುಬಿದ್ರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ವೇದಿಕೆಯಲ್ಲಿ ನಿಕಟಪೂರ್ವ ಶಾಸಕರಾದ ಲಾಲಾಜಿ ಆರ್ ಮೆಂಡನ್, ಯು.ಪಿ.ಸಿ.ಎಲ್ ಕಾರ್ಯನಿರ್ವಾಹಕ ನಿರ್ದೇಶಕ ಕಿಶೋರ್ ಆಳ್ವ, ಪಡುಬಿದ್ರಿ ವ್ಯವಸಾಯ ಸೇವಾ ಸಹಕಾರ ಸಂಘದ ಅಧ್ಯಕ್ಷರಾದ ವೈ. ಸುಧೀರ್ ಕುಮಾರ್, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರಾದ ಮೋಹನ್ ರಾಜ್, ತೋಟಗಾರಿಕೆ ಇಲಾಖೆಯ ಎಲ್. ಹೇಮಂತ್ ಕುಮಾರ್, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಪಡುಬಿದ್ರಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶಶಿಕಲಾ, ಪಲಿಮಾರು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ರಾಯೇಶ್ ಪೈ, ಹೆಜಮಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಮೋಹನ್ ಸುವರ್ಣ ಮತ್ತಿತರರು ಉಪಸ್ಥಿತರಿದ್ದರು.
