ಫಾರೂಕ್ ಚಂದ್ರನಗರ ಇವರಿಗೆ ದುಬೈನಲ್ಲಿ ಯೂತ್ ಐಕಾನ್ ಅಂತಾರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಕಾಪು : ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ.) ಯು.ಎ.ಇ ದುಬೈ ಇವರ ವತಿಯಿಂದ ಕಾಪುವಿನ ಸಮಾಜ ಸೇವಕರು ಉದ್ಯಮಿಗಳಾದ ಮೊಹಮ್ಮದ್ ಫಾರೂಕ್ ಚಂದ್ರನಗರ ಇವರ ಸಮಾಜ ಸೇವೆಯನ್ನು ಗುರುತಿಸಿ ಯೂತ್ ಐಕಾನ್ ಅಂತಾರಾಷ್ಟ್ರೀಯ ಪ್ರಶಸ್ತಿಯನ್ನು ದುಬೈನ ಉಡ್ಲಮ್ ಪಾರ್ಕ್ ಶಾಲಾ ಸಭಾಂಗಣದಲ್ಲಿ ನಡೆದ 2023-ದುಬೈ ಗಡಿನಾಡ ಉತ್ಸವ ಕಾರ್ಯಕ್ರಮದಲ್ಲಿ ಪ್ರಶಸ್ತಿಯನ್ನು ನೀಡಲಾಯಿತು.
ಕರ್ನಾಟಕ ಸರಕಾರದ ವಿಧಾನ ಪರಿಷತ್ ಸಭಾಪತಿಯವರಾದ ಬಸವರಾಜ ಹೊರಟ್ಟಿ ಹಾಗೂ ಕೇಂದ್ರ ರಾಜ್ಯಸಭಾ ಸದಸ್ಯರಾದ ಡಾ. ಎಲ್ ಹನುಮಂತಯ್ಯ, ದುಬೈ ಉದ್ಯಮಿ ಸರ್ವೋತ್ತಮ ಶೆಟ್ಟಿ ಅಬುಧಾಬಿ ಹಾಗೂ ಮಂಜೇಶ್ವರ ಶಾಸಕ ಎ.ಕೆ.ಎಂ ಅಶ್ರಫ್ ಇವರ ಉಪಸ್ಥಿತಿಯಲ್ಲಿ ಪ್ರಶಸ್ತಿ ನೀಡಿ ಅಭಿನಂದಿಸಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ.) ಅಧ್ಯಕ್ಷರಾದ ಇಬ್ರಾಹಿಂ ಖಲೀಲ್, ಕಾರ್ಯದರ್ಶಿ ಅಮರದೀಪ ಕಲ್ಲುರಾಯ ಹಾಗೂ ಅನೇಕ ದೇಶ ವಿದೇಶದ ಗಣ್ಯರು ರಾಜಕೀಯ ನೇತಾರರು ಉಪಸ್ಥಿತರಿದ್ದರು.
