ಕಾಪು : ವಿಶ್ವಕರ್ಮ ಸಮಾಜ ಸೇವಾ ಸಂಘ ಎಲ್ಲೂರು ಪಣಿಯೂರು - ವಾರ್ಷಿಕೋತ್ಸವ, ಶ್ರೀ ವಿಶ್ವಕರ್ಮ ಪೂಜೆ ಸಂಪನ್ನ
ಕಾಪು : ವಿಶ್ವಕರ್ಮ ಸಮಾಜ ಸೇವಾ ಸಂಘ (ರಿ.) ಎಲ್ಲೂರು ಪಣಿಯೂರು ಇದರ ವಾರ್ಷಿಕೋತ್ಸವ ಮತ್ತು ಶ್ರೀ ವಿಶ್ವಕರ್ಮ ಪೂಜೆಯು ಆದಿತ್ಯವಾರದಂದು ಸಂಘದಲ್ಲಿ ನೆರವೇರಿತು.
ಕುತ್ಯಾರು ಗ್ರಾಮ ಪಂಚಾಯತ್ ಅಧ್ಯಕ್ಷ ಜನಾರ್ದನ ಆಚಾರ್ಯ ಮಾತನಾಡಿ ಸಂಘವು ಕೊಡುತ್ತಿರುವ ವಿದ್ಯಾರ್ಥಿ ವೇತನವು ಉತ್ತಮವಾದ ಕಾರ್ಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ವಿಶ್ವಕರ್ಮ ಒಕ್ಕೂಟ (ರಿ.) ಅವಿಭಜಿತ ಉಡುಪಿ, ದಕ್ಷಿಣ ಕನ್ನಡ ಇದರ ಅಧ್ಯಕ್ಷ ಮಧು ಆಚಾರ್ಯ ಮಾತನಾಡಿ ಸಂಘದ ಸ್ವಂತ ಕಟ್ಟಡ ನಿರ್ಮಾಣದ ಯೋಜನೆಯಲ್ಲಿ ವಿಶ್ವಕರ್ಮ ಒಕ್ಕೂಟದ ಸಂಪೂರ್ಣ ಸಹಕಾರವು ಸಿಗಲಿದೆ ಎನ್ನುವ ಭರವಸೆ ನೀಡಿದರು.
ಸಂಘದ ಅಧ್ಯಕ್ಷರಾದ ವೈ.ಕಿಶೋರ್ ಆಚಾರ್ಯರ ಅಧ್ಯಕ್ಷತೆಯಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ, ಸಂಘದ ವ್ಯಾಪ್ತಿಯೊಳಗೆ ಬರುವ ಶಾಲೆಗಳಲ್ಲಿ ಹೆಚ್ಚು ಅಂಕ ಪಡೆದ ಸಮಾಜದ ಮೂವರು ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಿ ಗೌರವಿಸಲಾಯಿತು.
ಈ ಸಂದರ್ಭ ಸಂಘದ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.
