ಪಲಿಮಾರು : ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ರಕ್ತದಾನ ಶಿಬಿರ
ಪಲಿಮಾರು : ಹೊಯಿಗೆ ಫ್ರೆಂಡ್ಸ್ (ರಿ.) ಹೊಯಿಗೆ ಪಲಿಮಾರು, ಶ್ರೀ ದೇವಿ ಫ್ರೆಂಡ್ಸ್ ಕ್ಲಬ್ ಅವರಾಲು ಮಟ್ಟು, ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ (ರಿ.) ಉಡುಪಿ, ರಕ್ತನಿಧಿ ವಿಭಾಗ ಕೆಎಂಸಿ ಮಣಿಪಾಲ ಇವರ ಸಂಯುಕ್ತ ಆಶ್ರಯದಲ್ಲಿ ಆದಿತ್ಯವಾರ ಸರಕಾರಿ ಪದವಿ ಪೂರ್ವ ಕಾಲೇಜು ಪಲಿಮಾರು ಇಲ್ಲಿ ನಡೆದ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಶ್ರೀ ಮಹಾಲಿಂಗೇಶ್ವರ ಪಲಿಮಾರು ಮಹಾಗಣಪತಿ ದೇವಸ್ಥಾನದ ಪ್ರಧಾನ ಅರ್ಚಕರಾದ ಶ್ರೀನಿವಾಸ ಉಡುಪ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ (ರಿ.) ಉಡುಪಿ ಇದರ ಅಧ್ಯಕ್ಷ, ರಕ್ತದ ಆಪತ್ಭಾಂಧವ ಸತೀಶ್ ಸಾಲ್ಯಾನ್ ಮಣಿಪಾಲ ರನ್ನು ಸನ್ಮಾನಿಸಲಾಯಿತು. ಕಳೆದ 6 ವರ್ಷಗಳಿಂದ ಪಲಿಮಾರು ಭಾಗದಲ್ಲಿ ಸತತವಾಗಿ ಸ್ವಯಂಪ್ರೇರಿತ ರಕ್ತದಾನ ಶಿಬಿರವನ್ನು ಹಮ್ಮಿಕೊಂಡು ಹಲವು ರೋಗಿಗಳ ಜೀವ ಉಳಿವಿಗೆ ಕಾರಣವಾದ ಹೊಯಿಗೆ ಫ್ರೆಂಡ್ಸ್ ಪಲಿಮಾರು ಹಾಗೂ ಶ್ರೀದೇವಿ ಫ್ರೆಂಡ್ಸ್ ಕ್ಲಬ್ ಅವರಾಲು ಮಟ್ಟು ಅವರ ಕಾರ್ಯ ಶ್ಲಾಘನೀಯವಾದುದೆಂದು ಅತಿಥಿಗಳು
ಮೆಚ್ಚುಗೆ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಪಲಿಮಾರು ಗ್ರಾಮ ಪಂಚಾಯತ್ ಅಧ್ಯಕ್ಷೆ ಸೌಮ್ಯಲತ ಶೆಟ್ಟಿ, ಸರಕಾರಿ ಪದವಿ ಪೂರ್ವ ಕಾಲೇಜು ಪಲಿಮಾರು ಪ್ರಾಂಶುಪಾಲರಾದ ಗ್ರೆಟ್ಟ ಮೋರಸ್, ಹೊಯಿಗೆ ಫ್ರೆಂಡ್ಸ್ ಪಲಿಮಾರು ಅಧ್ಯಕ್ಷ ರಿತೇಶ್ ದೇವಾಡಿಗ,
ಶ್ರೀದೇವಿ ಫ್ರೆಂಡ್ಸ್ ಕ್ಲಬ್ ಅವರಾಲು ಮಟ್ಟು ಅಧ್ಯಕ್ಷ
ಹರೀಶ್, ಕೆಎಂಸಿ ಮಣಿಪಾಲ ವೈದ್ಯ ಡಾ.ಅಕ್ಷಯ್,
ಪಲಿಮಾರು ಕಾಲೇಜು ಅಭಿವೃದ್ದಿ ಸಮಿತಿ ಉಪಾಧ್ಯಕ್ಷ ಪ್ರಸಾದ್ ಪಲಿಮಾರು, ಪಲಿಮಾರು
ಪ್ರೌಢಶಾಲಾ ವಿಭಾಗ ಸರಕಾರಿ ಪದವಿ ಪೂರ್ವ ಕಾಲೇಜು ಮುಖ್ಯ ಶಿಕ್ಷಕಿ ಸುನಿತಾ, ಜಿತೇಂದ್ರ ಫುರ್ಟಾಡೋ, ಗಾಯತ್ರಿ ಡಿ ಪ್ರಭು, ಗುರುರಾಜ್ ರಾವ್, ಯೋಗೀಶ್ ಸುವರ್ಣ, ಶಿಕ್ಷಕ ಪಿಲಾರು ಸುಧಾಕರ ಶೆಣೈ ಮತ್ತಿತರರು ಉಪಸ್ಥಿತರಿದ್ದರು.
ಶ್ರೀದೇವಿ ಫ್ರೆಂಡ್ಸ್ ಕ್ಲಬ್ ಕಾರ್ಯದರ್ಶಿಯಾದ ಪ್ರತಾಪ್ ಸ್ವಾಗತಿಸಿ, ಕಾರ್ಯಕ್ರಮವನ್ನು ನಿರೂಪಿಸಿ, ವಂದಿಸಿದರು.
ರಕ್ತದಾನ ಶಿಬಿರದಲ್ಲಿ 90 ಯೂನಿಟ್ ರಕ್ತವನ್ನು ಸಂಗ್ರಹಿಸಲಾಯಿತು.
