ಕಾಪು : ಕಿಶೋರ ಯಕ್ಷಗಾನ - 2023 ಸಮಾರೋಪ
Thumbnail
ಕಾಪು : ಯಕ್ಷ ಶಿಕ್ಷಣ ಟ್ರಸ್ಟ್ (ರಿ.) ಉಡುಪಿ ಇವರು ತರಬೇತಿ ನೀಡಿದ ಕಾಪು ಭಾಗದ ಪ್ರೌಢಶಾಲೆಗಳ ವಿದ್ಯಾರ್ಥಿಗಳ ಯಕ್ಷಗಾನ ಪ್ರದರ್ಶನ "ಕಿಶೋರ ಯಕ್ಷಗಾನ 2023" ಇದರ ಸಮಾರೋಪ ಸಮಾರಂಭ ಕಾಪು ಲಕ್ಷ್ಮೀಜನಾರ್ಧನ ದೇವಸ್ಥಾನ ಮುಂಭಾಗದಲ್ಲಿ ನಡೆಯಿತು. ಶಾಸಕರು, ಕಾಪು ಪ್ರದರ್ಶನ ಸಂಘಟನಾ ಸಮಿತಿ ಅಧ್ಯಕ್ಷರಾದ ಗುರ್ಮೆ ಸುರೇಶ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಶುಭಹಾರೈಸಿದರು. ಯಕ್ಷ ಶಿಕ್ಷಣ ಟ್ರಸ್ಟ್ (ರಿ.) ಉಡುಪಿ, ಪ್ರದರ್ಶನ ಸಂಘಟನಾ ಸಮಿತಿ, ಕಾಪು ವತಿಯಿಂದ ನಿಸ್ಪೃಹ ಸಮಾಜ ಸೇವಕ, ಕಲಾ ಸಂಘಟಕ ಕಾಪು ಲೀಲಾಧರ ಶೆಟ್ಟಿ ಇವರ ಸ್ಮರಣೆಯಲ್ಲಿ ಆಯೋಜಿಸಲಾದ ಈ "ಕಿಶೋರ ಯಕ್ಷಗಾನ - 2023" ಕಾಪು ಲಕ್ಷ್ಮೀಜನಾರ್ಧನ ದೇವಸ್ಥಾನ ಮುಂಭಾಗದಲ್ಲಿ ಡಿಸೆಂಬರ್ 21ರಿಂದ 24 ರವರೆಗೆ ಸಂಜೆ 5.30 ರಿಂದ ರಾತ್ರಿ 9.00 ರವರೆಗೆ ದಿನಕ್ಕೆ ಎರಡು ಪ್ರೌಢಶಾಲಾ ವಿದ್ಯಾರ್ಥಿಗಳಿಂದ ಎರಡು ಪ್ರಸಂಗಗಳಂತೆ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ನಿಕಟಪೂರ್ವ ಶಾಸಕರಾದ ಲಾಲಾಜಿ ಆರ್ ಮೆಂಡನ್, ಸಾಯಿರಾಧಾ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕರಾದ ಮನೋಹರ್ ಶೆಟ್ಟಿ, ದಂಡತೀರ್ಥ ವಿದ್ಯಾಸಂಸ್ಥೆಗಳ ಸಂಚಾಲಕರಾದ ಡಾ. ಪ್ರಶಾಂತ್ ಶೆಟ್ಟಿ, ಮಂಗಳೂರು ಶ್ರೀನಿವಾಸ್ ಮೆಡಿಕಲ್ ಕಾಲೇಜು ಮೂಳೆ ತಜ್ಞರಾದ ಶಶಿರಾಜ್ ಕೆ ಶೆಟ್ಟಿ, ಯಕ್ಷಗಾನ ಕಲಾರಂಗದ ಅಧ್ಯಕ್ಷರಾದ ಎಂ ಗಂಗಾಧರ ರಾವ್, ಯಕ್ಷ ಶಿಕ್ಷಣ ಟ್ರಸ್ಟ್ ನ ಕಾರ್ಯದರ್ಶಿಗಳಾದ ಮುರಳಿ ಕಡೆಕಾರ್, ಕಾಪು ಪ್ರದರ್ಶನಾ ಸಂಘಟನಾ ಸಮಿತಿ ಸಂಯೋಜಕರಾದ ವಿ.ಜಿ ಶೆಟ್ಟಿ, ಕೋಶಾಧಿಕಾರಿಗಳಾದ ಶ್ರೀಕರ ಶೆಟ್ಟಿ ಕಲ್ಯಾ ಹಾಗೂ ಪ್ರಭಾತ್ ಶೆಟ್ಟಿ ಉಪಸ್ಥಿತರಿದ್ದರು.
Additional image
24 Dec 2023, 07:39 PM
Category: Kaup
Tags: