ವಿಧಾನಪರಿಷತ್ ವಿಪಕ್ಷ ನಾಯಕನಾಗಿ ಕೋಟ ಶ್ರೀನಿವಾಸ ಪೂಜಾರಿ ಆಯ್ಕೆ
Thumbnail
ಕರ್ನಾಟಕದ ರಾಜ್ಯದ ವಿಧಾನಪರಿಷತ್ ವಿಪಕ್ಷ ನಾಯಕನಾಗಿ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಆಯ್ಕೆ ಮಾಡಲಾಗಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಸೂಚನೆ ಮೇರೆಗೆ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ವಿಜಯೇಂದ್ರ ಅವರು ಶ್ರೀನಿವಾಸ ಪೂಜಾರಿ ಅವರನ್ನು ನೇಮಕ ಮಾಡಿದ್ದಾರೆ. ಇದೇ ವೇಳೆ ವಿಧಾನಸಭೆ ವಿರೋಧ ಪಕ್ಷದ ಉಪ ನಾಯಕನಾಗಿ ಅರವಿಂದ್‌ ಬೆಲ್ಲದ್‌ ಅವರನ್ನು ನೇಮಕ ಮಾಡಲಾಗಿದೆ. ವಿಧಾನಸಭೆಯ ಮುಖ್ಯ ಸಚೇತಕರಾಗಿ ಕುಷ್ಟಗಿ ಶಾಸಕ ದೊಡ್ಡನಗೌಡ ಪಾಟೀಲ್ ನೇಮಕವಾದರೆ, ವಿಧಾನಪರಿಷತ್​ನ ಮುಖ್ಯ ಸಚೇತಕರಾಗಿ ಎನ್.ರವಿಕುಮಾರ್ ಅವರನ್ನು ನೇಮಿಸಲಾಗಿದೆ. ವಿಧಾನಪರಿಷತ್ ವಿಪಕ್ಷ ಉಪ ನಾಯಕನಾಗಿ ಸುನೀಲ್ ವಲ್ಯಾಪುರೆ ಅವರನ್ನು ನೇಮಕ ಮಾಡಿದ್ದಾರೆ. ಕಾರ್ಕಳ ಶಾಸಕ ಸುನೀಲ್ ಕುಮಾರ್ ಅವರಿಗೆ ವಿಧಾನಪರಿಷತ್ ವಿಪಕ್ಷ ಉಪನಾಯಕನನ್ನಾಗಿ ನೇಮಕ ಮಾಡಲಾಗಿದೆ.
25 Dec 2023, 06:38 PM
Category: Kaup
Tags: