ಡಿಸೆಂಬರ್ 30 - 31 : ಬಿರುವೆರ್ ಕಾಪು ಸೇವಾ ಸಮಿತಿ ಕಾಪು - ಬಿರುವೆರ್ ಕಾಪು ಟ್ರೋಫಿ 2023
ಕಾಪು : ಬಿರುವೆರ್ ಕಾಪು ಸೇವಾ ಸಮಿತಿಯ ಆಶ್ರಯದಲ್ಲಿ ಬಿಲ್ಲವ ಸಮಾಜ ಬಾಂಧವರ ಸಹಭಾಗಿತ್ವದಲ್ಲಿ ಡಿಸೆಂಬರ್ 30 ಮತ್ತು 31ರಂದು ಸಮಾಜ ಸೇವೆಯ ಸಹಾಯಾರ್ಥವಾಗಿ ಪ್ರಥಮ ಬಾರಿಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಮಟ್ಟದ ಬಿಲ್ಲವ ಸಮಾಜ ಬಾಂಧವರಿಗೆ ಡಿಸೆಂಬರ್ 30-31 ರಂದು ಲೀಗ್ ಕಮ್ ನಾಕೌಟ್ ಮಾದರಿಯ 90 ಗಜಗಳ ಕ್ರಿಕೆಟ್ ಪಂದ್ಯಾಕೂಟವು ಕಾಪು ದಂಡತೀರ್ಥ ಶಾಲಾ ಮೈದಾನದಲ್ಲಿ ನಡೆಯಲಿದೆ ಎಂದು ಸಂಸ್ಥೆಯ ಅಧ್ಯಕ್ಷ ಬಾಲಕೃಷ್ಣ ಕೋಟ್ಯಾನ್ ತಿಳಿಸಿದರು.
ಅವರು ಗುರುವಾರ ಕಾಪು ಪತ್ರಕರ್ತರ ಸಂಘದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಮಾಹಿತಿ ನೀಡಿದರು.
ಈಗಾಗಲೇ ಬಿಡ್ಡಿಂಗ್ ಕಾರ್ಯ ನಡೆದಿದ್ದು ಹತ್ತು ತಂಡಗಳು ಭಾಗವಹಿಸಲಿದ್ದು, ವಿಜೇತ ತಂಡಕ್ಕೆ ರೂ.88,888 ಮತ್ತು ಬಿರುವೆರ್ ಕಾಪು ಟ್ರೋಫಿ, ದ್ವಿತೀಯ ಬಹುಮಾನ ರೂ.55,555 ಮತ್ತು ಬಿರುವೆರ್ ಕಾಪು ಟ್ರೋಫಿ ಸಿಗಲಿದೆ. ಉತ್ತಮದಾಂಡಿಗ, ಉತ್ತಮ ಎಸೆತಗಾರ, ಸರಣಿ ಶ್ರೇಷ್ಠ, ಪಂದ್ಯ ಶ್ರೇಷ್ಠ ಪ್ರಶಸ್ತಿ ನೀಡಲಾಗುವುದು ಎಂದರು.
ಶನಿವಾರ ಬೆಳಗ್ಗೆ 10:30 ಕ್ಕೆ ಸಭಾ ಕಾರ್ಯಕ್ರಮದ ಉದ್ಘಾಟನೆಯಲ್ಲಿ ಆರ್ಯ ಈಡಿಗ ಮಹಾ ಸಂಸ್ಥಾನ ಸೋಲೂರು ಮಠದ ಪೀಠಾಧಿಪತಿ ಶ್ರೀ ವಿಖ್ಯಾತನಂದ ಸ್ವಾಮೀಜಿ, ಅಖಿಲ ಭಾರತೀಯ ಸಂತ ಸಮಿತಿ ಕರ್ನಾಟಕ ಪ್ರಧಾನ ಕಾರ್ಯದರ್ಶಿ ಶ್ರೀ ಸಾಯಿ ಈಶ್ವರ್ ಗುರೂಜಿ ಆಶೀರ್ವಚನ ಮಾಡಲಿದ್ದಾರೆ.
ಮಾಜಿ ಶಾಸಕರಾದ ವಿನಯ್ ಕುಮಾರ್ ಸೊರಕೆ ಸೇರಿದಂತೆ ಸಮಾಜದ ವಿವಿಧ ಗಣ್ಯರು
ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು, ಆದಿತ್ಯವಾರ ಸಂಜೆ ಗಂಟೆ 5:30 ಕ್ಕೆ ಕಾರ್ಯಕ್ರಮದ ಸಮಾರೋಪ ಸಮಾರಂಭ ನಡೆಯಲಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಸುಜನ್ ಎಲ್ ಸುವರ್ಣ ಕುತ್ಯಾರ್,ವರುಣ್ ಬಿ ಕೋಟ್ಯಾನ್, ರವಿರಾಜ್ ಶಂಕರಪುರ, ಮಾಧವ ಪೂಜಾರಿ, ಯೋಗೀಶ್ ಪೂಜಾರಿ, ಯಾದವ ಪೂಜಾರಿ ಉಪಸ್ಥಿತರಿದ್ದರು
