ಉಚ್ಚಿಲ : ಶ್ರೀ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಪುತ್ತಿಗೆ ಮಠಾಧೀಶರ ಭೇಟಿ
Thumbnail
ಉಚ್ಚಿಲ : ಇತ್ತೀಚೆಗೆ ನವೀಕೃತಗೊಂಡ ಮೊಗವೀರ ಮಹಾಜನ ಸಂಘ ಸಂಚಾಲಿತ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೆಂದ್ರ ತೀರ್ಥ ಸ್ವಾಮೀಜಿ ಹಾಗೂ ಕಿರಿಯ ಸ್ವಾಮೀಜಿಗಳಾದ ಶ್ರೀ ಸುಶೀಂದ್ರ ತೀರ್ಥ ಸ್ವಾಮೀಜಿಯವರು ಆಗಮಿಸಿ, ಶ್ರೀ ಮಹಾಲಕ್ಷ್ಮಿಗೆ ಮತ್ತು ಸ್ವಾಮೀಜಿಯವರ ಪಟ್ಟದ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಉಚ್ಚಿಲ ಮಹಾಲಕ್ಷ್ಮಿ ದೇವಳದ ವತಿಯಿಂದ ಸ್ವಾಮೀಜಿಯವರಿಗೆ ಪೂರ್ಣ ಕುಂಭ ಸ್ವಾಗತ ನೀಡಲಾಯಿತು. ದೇವಳದ ಪ್ರಧಾನ ಅರ್ಚಕ ಕೆ ವಿ ರಾಘವೇಂದ್ರ ಉಪಾಧ್ಯಾಯರವರು ಶ್ರೀ ಮಹಾಲಕ್ಷ್ಮಿಗೆ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭ ಮೋಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್ ಬೆಳ್ಳಂಪಳ್ಳಿ, ಕ್ಷೇತ್ರಾಡಳಿತ ಮಂಡಳಿಯ ಅಧ್ಯಕ್ಷ ವಾಸುದೇವ ಸಾಲ್ಯಾನ್, ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಗುಂಡು ಬಿ. ಅಮೀನ್, ದೇವಸ್ಥಾನದ ಪ್ರಧಾನ ಮೆನೇಜರ್ ಸತೀಶ್ ಅಮೀನ್ ಪಡುಕೆರೆ, ಕಾರ್ಯದರ್ಶಿ ಸುಧಾಕರ್ ಕುಂದರ್ ಸಹಿತ ಭಕ್ತಾದಿಗಳು ಉಪಸ್ಥಿತರಿದ್ದರು.
Additional image
15 Jan 2024, 07:51 PM
Category: Kaup
Tags: