ಕಟಪಾಡಿ : ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಮಹಿಳಾ ಘಟಕದ ಸಭೆ
ಕಟಪಾಡಿ : ರಾಷ್ಟ್ರೀಯ ಬಿಲ್ಲವರ ಮಹಾಮಂಡಲ ಉಡುಪಿ ಜಿಲ್ಲೆ ಇದರ ಮಹಿಳಾ ಘಟಕದ ಸಭೆಯು ಕಟಪಾಡಿ ಶ್ರೀ ವಿಶ್ವನಾಥ ಕ್ಷೇತ್ರದಲ್ಲಿ ಜರಗಿತು.
ಇದೇ ಸಂದರ್ಭ ಮಾರ್ಚ್ 10ರಂದು ನಡೆಯಲಿರುವ ಬೆಳ್ಳಿ ಹಬ್ಬ ಸಂಭ್ರಮ ಸಮಾವೇಶದ ಆಮಂತ್ರಣ ಪತ್ರಿಕೆಯನ್ನು ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷರಾದ ರಾಜಶೇಖರ ಕೋಟ್ಯಾನ್ ಬಿಡುಗಡೆಗೊಳಿಸಿದರು.
ಸಮಾರಂಭದ ಅಧ್ಯಕ್ಷತೆಯನ್ನು ಬಿಲ್ಲವರ ಮಹಾಮಂಡಲದ ಉಡುಪಿ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಗೀತಾಂಜಲಿ ಸುವರ್ಣ ವಹಿಸಿದ್ದರು.
ಈ ಸಂದರ್ಭ ಬಿಲ್ಲವ ಮುಖಂಡರಾದ ಸತ್ಯಜಿತ್ ಸುರತ್ಕಲ್, ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಪ್ರಧಾನ ಕಾರ್ಯದರ್ಶಿ ಗಂಗಾಧರ ಪೂಜಾರಿ, ಸದಸ್ಯ ಗಣೇಶ್ ಮೂಡುಪೆರಾರೆ, ಜಿಲ್ಲಾ ಮಹಿಳಾ ಒಕ್ಕೂಟದ ಅಧ್ಯಕ್ಷೆ ಪದ್ಮ ರತ್ನಾಕರ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ರಾಜ್‌ಕುಮಾರ್ ಬಹರೈನ್, ಕಟಪಾಡಿ ಶ್ರೀ ವಿಶ್ವನಾಥ ಕ್ಷೇತ್ರಾಡಳಿತ ಮಂಡಳಿಯ ಉಪಾಧ್ಯಕ್ಷ ಆನಂದ ಮಾಬಿಯಾನ್, ಶ್ರೀ ನಾರಾಯಣಗುರು ಕೋಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಹರಿಶ್ಚಂದ್ರ ಅಮೀನ್, ಬಿಲ್ಲವ ಪರಿಷತ್ ಮಾಜಿ ಅಧ್ಯಕ್ಷ ನವೀನ್ ಅಮೀನ್ ಶಂಕರಪುರ, ಸಮಾಜದ ಇತರ ಗಣ್ಯರು ಉಪಸ್ಥಿತರಿದ್ದರು.
