ಅಯೋದ್ಯೆ ರಾಮ ಮಂದಿರದಲ್ಲಿ ರಾಮಲಲ್ಲಾನ ಪ್ರಾಣ ಪ್ರತಿಷ್ಠೆ : ಕಾಪು ಮಾರಿಯಮ್ಮ ಸನ್ನಿದಾನದಲ್ಲಿ ವಿಶೇಷ ಪೂಜೆ
Thumbnail
ಕಾಪು : ಪ್ರಭು ಶ್ರೀ ರಾಮಚಂದ್ರನ ಪ್ರಾಣಪ್ರತಿಷ್ಠೆ ಸಂದರ್ಭ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಕಾಪು ಶ್ರೀ ಮಾರಿಯಮ್ಮ ದೇವಸ್ಥಾನ (ಶ್ರೀ ಹೊಸ ಮಾರಿಗುಡಿ ದೇವಸ್ಥಾನ) ಇಲ್ಲಿ ಕ್ಷೇತ್ರದ ಪ್ರಧಾನ ಅರ್ಚಕರಾದ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯಾ ಇವರು ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ ಮತ್ತು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರಮೇಶ್ ಹೆಗ್ಡೆ ಕಲ್ಯಾ ಉಪಸ್ಥಿತಿಯಲ್ಲಿ ವಿಶೇಷ ಪೂಜೆಯನ್ನು ಸಲ್ಲಿಸಿದರು. ಬೈದಶ್ರೀ ಭಜನಾ ತಂಡ ಬಡಾ ಎರ್ಮಾಳು ಇವರಿಂದ ಭಜನಾ ಸಂಕೀರ್ತನೆ ನಡೆಯಿತು. ವ್ಯವಸ್ಥಾಪನಾ ಸಮಿತಿಯ ಸದಸ್ಯರುಗಳಾದ ರವೀಂದ್ರ ಎಮ್, ಬಾಬು ಮಲ್ಲಾರ್, ಶೈಲಜಾ ಪುರುಷೋತ್ತಮ್, ಪ್ರಬಂಧಕರಾದ ಗೋವರ್ಧನ್ ಸೇರಿಗಾರ್, ಸಿಬ್ಬಂದಿ ಲಕ್ಷ್ಮಣ್ ಶೆಟ್ಟಿ ಮಂಡೇಡಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
Additional image Additional image
23 Jan 2024, 05:36 PM
Category: Kaup
Tags: